ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ದುಡ್ಡಿನಿಂದ ಚುನಾವಣೆ ನಡೆಸುತ್ತಿದ್ದಾರೆ : ಎಚ್‌.ಡಿ.ದೇವೇಗೌಡ ಆರೋಪ

Last Updated 27 ನವೆಂಬರ್ 2019, 9:55 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದುಡ್ಡಿನಿಂದ ಉಪಚುನಾವಣೆ ನಡೆಸುತ್ತಿದ್ದಾರೆ. ಎಷ್ಟು ದುಡ್ಡು ಸಾಗಿಸಿದರೂ ಕೇಳುವವರು ಇಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಬುಧವಾರ ಗಂಭೀರ ಆರೋಪ ಮಾಡಿದರು.

ಬಿಜೆಪಿಯವರು ಪ್ರತಿಯೊಂದು ಕ್ಷೇತ್ರಕ್ಕೂ ಉಸ್ತುವಾರಿಯನ್ನು ನೇಮಿಸಿದ್ದಾರೆ. ಅವರು ಆ ಕ್ಷೇತ್ರದಲ್ಲಿದ್ದುಕೊಂಡೇ ಕೆಲಸ ಮಾಡಬೇಕು. ಫೋನ್‌ ಮಾಡಿ ಎಷ್ಟು ಹಣ ಬೇಕಾದರೂ ತರಿಸಿಕೊಳ್ಳಬಹುದು. ಅವರು ಎಲ್ಲಿಗೆ ದುಡ್ಡು ಸಾಗಿಸಿದರೂ ಕೇಳುವವರು ಇಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮದವರಿಗೆ ತಿಳಿಸಿದರು.

‘ಎಷ್ಟು ಹಣ ಬೇಕಾದರೂ ಕೇಳಿ ಎಂದು ಎಲ್ಲ ಅನರ್ಹ ಶಾಸಕರಿಗೆ ಸೂಚಿಸಲಾಗಿದೆ. ಹೀಗಾಗಿ ಎಲ್ಲ 15 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಅನ್ನುತ್ತಿದ್ದಾರೆ. ಇಷ್ಟೆಲ್ಲ ಇರಬೇಕಾದರೆ ನಮಗೆ ಏನು ಮಾಡಲು ಆಗುತ್ತದೆ’ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲೂ ಬದಲಾವಣೆ: ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ, ‘ದೇಶದ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಉಪಚುನಾವಣೆ ಫಲಿತಾಂಶ ನಂತರ ಕರ್ನಾಟಕದಲ್ಲೂ ಏನೇನು ಬದಲಾವಣೆ ಆಗುತ್ತದೆ ನೋಡೋಣ. ಫಲಿತಾಂಶ ಬಂದ ಮೇಲೆ ಸೋನಿಯಾ ಗಾಂಧಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT