ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಸರ್ವರ ನಾಶ: ಮಲ್ಲಿಕಾರ್ಜುನ ಖರ್ಗೆ

Last Updated 2 ಡಿಸೆಂಬರ್ 2019, 20:11 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ವರ ಪ್ರಗತಿ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ. ಆದರೆ ಬಿಜೆಪಿಯವರಿಂದ ಸರ್ವರೂ ನಾಶವಾಗುತ್ತಿದ್ದಾರೆ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಮಹಾಲಕ್ಷ್ಮಿ ಲೇಔಟ್‌ನಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದಖರ್ಗೆ,‘ಬಡವರ ಅನ್ನ ಕಿತ್ತುಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ಬಿಪಿಎಲ್ ಕಾರ್ಡ್‌ಗೆ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು 4 ಕೆ.ಜಿ.ಗೆಇಳಿಸಲು ಹೊರಟಿದ್ದಾರೆ. ಎರಡು ಹೊತ್ತಿನ ಊಟಕ್ಕೂ ಕಲ್ಲು ಹಾಕುತ್ತಿದ್ದಾರೆ. ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡಲಾಗುವುದು’ ಎಂದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ವರಿಗೂ ನ್ಯಾಯ ಸಿಗುತ್ತದೆ. ಸಮಸ್ಯೆಗಳು ಪರಿಹಾರ ಕಾಣುತ್ತವೆ. ಇಂದಿರಾ ಕ್ಯಾಂಟೀನ್, ವಿದ್ಯಾಸಿರಿ ಸೇರಿದಂತೆ ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಏನು ಮಾಡಿದ್ದಾರೆ’ ಎಂದು ಪ್ರಶ್ನಿಸಿದರು. ‘ಯುವಜನರು ಉದ್ಯೋಗ ಕೇಳಿದರೆ ಪಕೋಡ ಮಾರಾಟ ಮಾಡಿ ಎನ್ನುತ್ತಾರೆ’ ಎಂದು ಟೀಕಿಸಿದರು.

‘14 ತಿಂಗಳು ಆಡಳಿತ ನಡೆಸಿದ ಎಚ್.ಡಿ.ಕುಮಾರಸ್ವಾಮಿ ಹಾಗೂ ಈಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿ.ಎಸ್.ಯಡಿಯೂರಪ್ಪ ಬಡವರ ಪರವಾಗಿ ಯಾವುದೇ ಹೊಸ ಯೋಜನೆಗಳನ್ನು ರೂಪಿಸಿಲ್ಲ. ಜೆಡಿಎಸ್, ಬಿಜೆಪಿ ಅಭ್ಯರ್ಥಿಗೆ ಮತ ನೀಡಿದರೆ ಫಲಸಿಗದು. ಶಿವರಾಜ್‌ಗೆ ಅವಕಾಶ ನೀಡಿದರೆ ಕ್ಷೇತ್ರದಲ್ಲೇ ಇದ್ದು ಕೆಲಸ ಮಾಡುತ್ತಾರೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT