ಮಂಗಳವಾರ, ಜನವರಿ 21, 2020
25 °C

ಉಪಚುನಾವಣೆ: ಕನಿಷ್ಠ 13 ಕ್ಷೇತ್ರದಲ್ಲಿ ಬಿಜೆಪಿ ಗೆಲುವು, ಯಡಿಯೂರಪ್ಪ ವಿಶ್ವಾಸ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಳೆ (ಸೋಮವಾರ) ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬಿಜೆಪಿ ಕನಿಷ್ಠ 13 ಕ್ಷೇತ್ರದಲ್ಲಿ ಗೆಲ್ಲಲಿದೆ. ಕಾಂಗ್ರೆಸ್ – ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಮೂರೂವರೆ ವರ್ಷ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಗಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಪಕ್ಷವಾಗಿ ಸಂಪೂರ್ಣ ಸಹಕಾರ ನೀಡುವ ವಿಶ್ವಾಸವಿದೆ’ ಎಂದು ಹೇಳಿದರು. 

ಸರ್ಕಾರದ ಅವಧಿ ಪೂರ್ಣವಾದ ಬಳಿಕ ಮತ್ತೊಮ್ಮೆ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬರಲಿದೆ.‌ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಚುನಾವಣೆ ಫಲಿತಾಂಶದ ಬಳಿಕ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ನಾವು ಆಡಳಿತದಲ್ಲಿ ಮುಂದುವರೆಯುತ್ತೇವೆ ಹಾಗೆಯೇ ಕಾಂಗ್ರೆಸ್ ಪ್ರತಿಪಕ್ಷದಲ್ಲಿ ಮುಂದುವರೆಯಲಿದೆ ಎಂದು ವ್ಯಂಗ್ಯವಾಡಿದರು. 

ಇದನ್ನೂ ಓದಿ... ಮತಗಟ್ಟೆ ಸಮೀಕ್ಷೆ: ಬಿ.ಎಸ್‌.ಯಡಿಯೂರಪ್ಪ ಸರ್ಕಾರ ಸೇಫ್‌

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು