ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಸಂತೋಷ್‌ 'ಕೌಂಟರ್‌'ಗೆ ಟ್ವೀಟ್‌ ಮೂಲಕವೇ 'ತಿವಿದ' ಸಿದ್ದರಾಮಯ್ಯ

Last Updated 7 ಜುಲೈ 2020, 9:14 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂಆರ್.ಎಸ್.ಎಸ್ ನಾಯಕರಾದಬಿ.ಎಲ್‌.ಸಂತೋಷ್‌ ಮತ್ತುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರೆದಿದ್ದು ಮಂಗಳವಾರ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತೋಷ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಕೊರೊನಾ ಸಂದರ್ಭದ ಪರಿಸ್ಥಿಯಲ್ಲೂ ವಿರೋಧ ಪಕ್ಷದ ನಾಯಕರು ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಸಂತೋಷ್‌ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರು. ಇದಕ್ಕೆ ಟ್ವೀಟ್ ಮೂಲಕವೇ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್. ಎಸ್ ನಾಯಕರಾದ ಸಂತೋಷ್‌ ಆರೋಪಿಸಿದ್ದಾರೆ, ಅವರು ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ, ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ ಎಂದು ಟ್ವೀಟ್‌ ಮಾಡಿದ್ದಾರೆ.

ಸರಣಿ ಟ್ವೀಟ್‌ ಮಾಡುವ ಮೂಲಕ ಸಂತೋಷ್‌ ಅವರನ್ನು ಸಿದ್ಧರಾಮಯ್ಯ ಕುಟುಕಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಸಂತೋಷ್‌ ಅವರು ಕೇಳಿದ್ದಾರೆ, ಅದನ್ನು ಕೊಡೋಣ.
ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಅವರು ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಲಿ ಹಾಗೇ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ 'ಪಿಎಂ ಕೇರ್ಸ್' ನಿಧಿಯ ಲೆಕ್ಕಕೊಡಿ ಎಂದು ಸಿದ್ದರಾಮಯ್ಯ ಸಂತೋಷ್‌ ಅವರನ್ನು ಕೇಳಿದ್ದಾರೆ.

ಚೀನಾ ಸೇನೆ ಎರಡು ಕಿ.ಮೀ. ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಸಂತೋಷ್‌ ಅವರೇನು ರಕ್ಷಣಾ ಸಚಿವರೇ,
ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ಪ್ರಧಾನ ಮಂತ್ರಿಗಳು ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ ಎನ್ನುವುದನ್ನೂ ತಿಳಿಸಲಿ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಕೊನೆಯ ಟ್ವೀಟ್‌ನಲ್ಲಿ ಸಂತೋಷ್‌ ಅವರೇ, ಯಡಿಯೂರಪ್ಪ ಅವರಿಗೆ ನೀವು ನೀಡಿರುವ ಶಹಭಾಸ್‌ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ಎಂದು ಪ್ರಶ್ನೆ ಮಾಡಿದ್ದಾರೆ. ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್‌ಗಿರಿ ಕೊಡಬಹುದೇನೋ ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT