ಗುರುವಾರ , ಏಪ್ರಿಲ್ 9, 2020
19 °C
ಉದ್ಯಮಿಯಿಂದ ದೂರು; ಯುವತಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್

ಕಿರುಕುಳ ಹೆಸರಿನಲ್ಲಿ ₹3 ಕೋಟಿಗೆ ಬ್ಲ್ಯಾಕ್‌ಮೇಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನನ್ನ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿ ಮರ್ಯಾದೆ ತೆಗೆಯುವುದಾಗಿ ಬೆದರಿಸುತ್ತಿರುವ ಇಬ್ಬರು, ದೂರು ನೀಡಬಾರದೆಂದರೆ ₹ 3 ಕೋಟಿ ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಉದ್ಯಮಿಯೊಬ್ಬರು ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ.

‘ಮ್ಯೂಸಿಯಂ ರಸ್ತೆಯಲ್ಲಿರುವ ಕಂಪನಿಯೊಂದರ ಮುಖ್ಯಸ್ಥರಾಗಿರುವ ಉದ್ಯಮಿ, ಇದೇ 18ರಂದು ದೂರು ನೀಡಿದ್ದಾರೆ. ಯುವತಿ ಹಾಗೂ ಅವರ ಸ್ನೇಹಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿಗಳ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.

ದೂರಿನ ವಿವರ: ‘ಯುವತಿಯೊಬ್ಬರು 2019ರ ಏಪ್ರಿಲ್‌ನಲ್ಲಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲ ತಿಂಗಳ ನಂತರ ಅವರ ಸಂಬಳ ಹೆಚ್ಚಿಸಲಾಗಿತ್ತು. ಅದಕ್ಕೆ ತಕ್ಕಂತೆ ಅವರು ಕೆಲಸ ಮಾಡುತ್ತಿರಲಿಲ್ಲ. ಕಾರ್ಯನಿರ್ವಾಹಕ ಅಧಿಕಾರಿ ಯುವತಿಗೆ ಬುದ್ದಿ ಹೇಳಿದ್ದರು’ ಎಂದು ಉದ್ಯಮಿ ಹೇಳಿದ್ದಾರೆ.

‘ಅದನ್ನೇ ಅವಮಾನ ಎಂದು ತಿಳಿದ ಯುವತಿ, ‘ನಿಮ್ಮ ಮೇಲೆ ಲೈಂಗಿಕ ಕಿರುಕುಳ ದೂರು ನೀಡುತ್ತೇನೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ಮರ್ಯಾದೆ ತೆಗೆಯುತ್ತೇನೆ’ ಎಂದು ಇ–ಮೇಲ್ ಕಳುಹಿಸಿದ್ದರು. ಯುವತಿ ಪರವಾಗಿ ಬಂದಿದ್ದ ಅವರ ಸ್ನೇಹಿತ ಸಹ ಅದನ್ನೇ ಹೇಳಿದ್ದ.’ 

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ತಾಜ್‌ ಹೋಟೆಲ್‌ಗೆ ಮಾ. 4ರಂದು ನನ್ನನ್ನು ಕರೆಸಿದ್ದ ಆರೋಪಿಗಳು, ದೂರು ದಾಖಲಿಸಬಾರದೆಂದರೆ ₹ 3 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದಕ್ಕೆ ನಾನು ಒಪ್ಪಿರಲಿಲ್ಲ. ಮಾ. 6ರಂದು ಎರಡನೇ ಬಾರಿ ನನ್ನನ್ನು ಭೇಟಿ ಆಗಿದ್ದ ಆರೋಪಿಗಳು, ಪುನಃ ಹಣ ನೀಡುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾರೆ’ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು