ಭಾನುವಾರ, ಸೆಪ್ಟೆಂಬರ್ 19, 2021
29 °C
ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿತ್ತು ಆಕ್ರೋಶ

ಕಾರ್ಮಿಕರಿಗೆ ಅರ್ಥವಾಗಲಿ ಎಂದು ಹಿಂದಿ ಭಾಷಣ: ಲಿಂಬಾವಳಿ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಪ್ರಚಾರ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದರ ಬೆನ್ನಲ್ಲೇ, ಹಿಂದಿಯಲ್ಲಿ ಭಾಷಣ ಮಾಡಿರುವುದರ ಬಗ್ಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.

‘ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಪ್ರಚಾರ ಭಾಷಣಗಳು ಇವೆ. ಕನ್ನಡ ಗೊತ್ತಿಲ್ಲದವರಿಗೆ 10 ಕಡೆಗಳಲ್ಲಿ ಕನ್ನಡ ತರಗತಿಗಳನ್ನು ನಡೆಸುತ್ತಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಪಡೆ ರಚಿಸುತ್ತಿದ್ದೇನೆ. ಅದಕ್ಕೆ ಎಲ್ಲ ವರ್ಗದ ಜನರ ಸಹಕಾರ ಅಗತ್ಯ. ದುಡಿಯುವ ವರ್ಗಕ್ಕೆ ಅರ್ಥವಾಗಲಿ ಎಂಬ ಕಾರಣಕ್ಕೆ ಹಿಂದಿಯಲ್ಲಿ ಭಾಷಣ ಮಾಡಿದ್ದೇನೆ’ ಎಂದು ಲಿಂಬಾವಳಿ ಸ್ಪಷ್ಟನೆ ನೀಡಿದ್ದಾರೆ.

ಲಿಂಬಾವಳಿ ಅವರು ಮಹದೇವಪುರ ಅಭಿವೃದ್ಧಿ ಕುರಿತಂತೆ ಕನ್ನಡ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತನಾಡಿರುವ ಮೂರು ವಿಡಿಯೊಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದರು. ಹಿಂದಿ ಭಾಷೆಯಲ್ಲಿನ ವಿಡಿಯೊ ಮತ್ತು ಸ್ಟೇಟಸ್‌ ಹಾಕಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಶಾಸಕರನ್ನು ತರಾಟೆಗೆ ತಗೆದುಕೊಂಡಿದ್ದರು.

ಇದನ್ನೂ ಓದಿ: ಮಹದೇವಪುರ ಮತದಾರರಿಗೆ ಕನ್ನಡವೇ ಸಾಕಲ್ವಾ ಲಿಂಬಾವಳಿ..?​

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು