ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬದಲಾವಣೆಗೆ ಸೂಚನೆ

7

ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬದಲಾವಣೆಗೆ ಸೂಚನೆ

Published:
Updated:

ಬೆಂಗಳೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನೇಮಕಗೊಂಡಿದ್ದ ಎಲ್ಲ ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರನ್ನು ಕೈ ಬಿಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮುಂದಾಗಿದ್ದಾರೆ.

ಈಗಿರುವ ಬ್ಲಾಕ್‌ ಸಮಿತಿ ಅಧ್ಯಕ್ಷರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡದೇ ನಿಷ್ಕ್ರಿಯರಾಗಿದ್ದರು. ಇಂತಹವರನ್ನು ತಕ್ಷಣವೇ ಬದಲಾಯಿಸಿ, ಉತ್ತಮ ಸಂಘಟನಕಾರರನ್ನು ನೇಮಿಸಲಾಗುವುದು ಎಂದು ದಿನೇಶ್‌ ಗುಂಡೂರಾವ್‌ ಹೇಳಿದ್ದರು.

 ಇದರ ಬೆನ್ನಲ್ಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಪಿ ಉಲ್ಲಾ ಅವರು ಎಲ್ಲ ಜಿಲ್ಲಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಸಂಘಟನೆಯಲ್ಲಿ ಸಕ್ರಿಯವಾಗಿಲ್ಲದ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸದ ಬ್ಲಾಕ್‌ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಪಕ್ಷದ ಸಂಘಟನೆಯಲ್ಲಿ ನಿಪುಣರು ಮತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ ನಾಯಕರ ಪಟ್ಟಿಯನ್ನು ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಅಲ್ಲದೆ, 10 ವರ್ಷ ಅಥವಾ ಎರಡು ಅವಧಿಗಳನ್ನು ಯಶಸ್ವಿಯಾಗಿ ನಿರ್ವಹಿಸದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ಬದಲಾವಣೆ ಮಾಡಬೇಕು. ಬದಲಾವಣೆಗೊಂಡ ಬ್ಲಾಕ್‌ ಅಧ್ಯಕ್ಷರಿಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಿಗಳನ್ನಾಗಿ ನೇಮಕ ಮಾಡಿಕೊಳ್ಳಬೇಕು. ಸೆಪ್ಟಂಬರ್‌ 30 ರ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಷಪಿ ಉಲ್ಲಾ ಸೂಚಿಸಿದ್ದಾರೆ.

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !