ಗುರುವಾರ , ಏಪ್ರಿಲ್ 2, 2020
19 °C

ಕೋವಿಡ್ –19: ಖಾಲಿಯಾದ ಬಿಎಂಟಿಸಿ, ತುಂಬಿ ತುಳುಕಿದ ಕೆಎಸ್‌ಆರ್‌ಟಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ –19 ಭೀತಿಯಿಂದ ನಗರದಲ್ಲಿ ಸಂಚಾರಕ್ಕೆ ಹೆದರಿರುವ ಜನ, ಬೆಂಗಳೂರು ಖಾಲಿ ಮಾಡುತ್ತಿದ್ದಾರೆ.

ಜನ ಸಂಚಾರ ಕಡಿಮೆಯಾದ ಕಾರಣ ಮಧ್ಯಾಹ್ನದ ನಂತರ ಶೇ 10ರಷ್ಟು ಬಸ್‌ಗಳ ಸಂಚಾರವನ್ನು ಬಿಎಂಟಿಸಿ ರದ್ದುಪಡಿಸಿದೆ.

ಪ್ರಯಾಣಿಕರಿಲ್ಲದ ಮಾರ್ಗಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಲಾಗಿದೆ. ಸಂಜೆ ನಂತರ ಜನ ಸಂಚಾರ ಹೆಚ್ಚಾದರೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಗರದಿಂದ ಹೊರ ಊರುಗಳಿಗೆ ಹೋಗಲು ಜನ ಮುಗಿ ಬಿದ್ದಿದ್ದಾರೆ. ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣಗಳಿಂದ ಹೊರಟ ಎಲ್ಲಾ ಬಸ್‌ಗಳು ಭರ್ತಿಯಾಗಿ ತೆರಳಿದವು. ಕರ್ನಾಟಕ ಸಾರಿಗೆ ಮಾತ್ರವಲ್ಲದೇ ಚಿಕ್ಕಮಗಳೂರು, ಮಂಗಳೂರು, ತಿರುಪತಿ, ಶಿವಮೊಗ್ಗ, ಮಡಿಕೇರಿಗೆ ಹೋದ ಐಷಾರಾಮಿ ಬಸ್‌ಗಳು ಭರ್ತಿಯಾಗಿಯೇ ತೆರಳಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಹೊರ ಜಿಲ್ಲೆಗಳಿಗೆ ಹೋಗಲು ನಗರದ ಎಲ್ಲಾ ನಿಲ್ದಾಣಗಳಲ್ಲಿ ಬಸ್ ಹತ್ತಲು ಜನ ಮುಗಿಬಿದ್ದಿದ್ದಾರೆ. ಟಿಕೆಟ್ ಕಾಯ್ದಿರಿಸುವ ಕೌಂಟರ್‌ಗಳ ಮುಂದೆಯೂ ಸಾಲುಗಟ್ಟಿ ನಿಂತಿದ್ದಾರೆ. ಆದರೆ, ಹೊರ ರಾಜ್ಯಗಳಿಗೆ ತೆರಳುವ ಐಷಾರಾಮಿ ಬಸ್‌ಗಳಿಗೆ ಆಸನ ಕಾಯ್ದಿರಿಸಿರುವ ಪ್ರಯಾಣಿಕರ ಸಂಖ್ಯೆ ಶೇ 20ರಷ್ಟು ಕಡಿಮೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು