ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ, ಕಾಂಗ್ರೆಸ್‌ ಪಕ್ಷದ ಹೇಳಿಕೆಗಳೆರಡು ಒಂದೇ: ಪ್ರಹ್ಲಾದ್‌ ಜೋಶಿ

Last Updated 12 ಜನವರಿ 2020, 8:38 IST
ಅಕ್ಷರ ಗಾತ್ರ

ರಾಯಚೂರು: ‘ಪಾಕಿಸ್ತಾನ ಮುಖಂಡರ ಹೇಳಿಕೆಗಳು ಮತ್ತು ಕಾಂಗ್ರೆಸ್‌ ಮುಖಂಡರ ಹೇಳಿಕೆಗಳು ಎರಡೂ ಒಂದೇ ರೀತಿಯಲ್ಲಿವೆ. ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ದೇಶದ ವಿರುದ್ಧವೂ ಕಾಂಗ್ರೆಸ್‌ ಮಾತನಾಡುತ್ತಿದೆ’ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹರಿಹಾಯ್ದರು.

ನಗರದಲ್ಲಿ ಬಿಜೆಪಿಯಿಂದ ಭಾನುವಾರ ಆಯೋಜಿಸಿದ್ದ ಸಿಎಎ ಬೆಂಬಲಿಸಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುವ ಚಹರೆಯನ್ನು ವಿಶ್ವದ ಎದುರು ತೆರೆದಿಡುವಲ್ಲಿ ಭಾರತ ಇತ್ತೀಚೆಗೆ ಯಶಸ್ವಿಯಾಗಿದೆ. ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುವ ಅನ್ಯಾಯವನ್ನು ವಿಶ್ವಕ್ಕೆ ತೋರಿಸಲು ಈಗ ಸದಾವಕಾಶ ಬಂದಿದ್ದು, ಕಾಂಗ್ರೆಸ್‌ ಈ ಬಗ್ಗೆ ತಿಳಿದುಕೊಳ್ಳಬೇಕಿದೆ. ನೆಹರು–ಲಿಯಾಖತ್‌ ಒಪ್ಪಂದ ಪಾಲನೆಯಾಗಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ’ ಎಂದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆಗೊಳಿಸಿದ ಸಿ.ಡಿ. ಕುರಿತು ಪ್ರತಿಕ್ರಿಯೆ ನೀಡಿ, ‘ಕುಮಾರಸ್ವಾಮಿ ‘ಗುದ್ದಿ ಓಡಿ ಹೋಗುವ (ಹಿಟ್‌ ಅ್ಯಂಡ್‌ ರನ್‌)’ ಕೆಲಸ ಮಾಡುತ್ತಾರೆ. ಪೊಲೀಸ್‌ ಅಧಿಕಾರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ಕೈಗೊಂಡ ಕ್ರಮದ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT