ಶನಿವಾರ, ನವೆಂಬರ್ 23, 2019
23 °C
ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮದ ಫಲಶ್ರುತಿ

ಶಿಕ್ಷಣ ಇಲಾಖೆ ಇಬ್ಬರು ನೌಕರರ ವಿರುದ್ಧ ಕ್ರಮ

Published:
Updated:

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯ ಇಬ್ಬರು ನೌಕರರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಆದೇಶಿಸಿದ್ದಾರೆ.

‘ಪ್ರಜಾವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಿಕ್ಷಕ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಅನುಮೋದನೆ ಪಡೆಯಲು ಪ್ರಯತ್ನಿಸಿದ್ದ ಆಕಾಂಕ್ಷಿಯೊಬ್ಬರು ಇಬ್ಬರು ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

ಪ್ರತಿಕ್ರಿಯಿಸಿ (+)