ಸೋಮವಾರ, ಆಗಸ್ಟ್ 2, 2021
26 °C

ಸಿಗರೇಟ್ ಅಕ್ರಮ ಮಾರಾಟಕ್ಕೆ ಲಂಚ ಆರೋಪ: ತಡೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಗರೇಟ್ ವ್ಯಾಪಾರಿ ಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಪ್ರಭುಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳಿಗೆ ನೀಡಲಾಗಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ 23ರವರೆಗೂ ವಿಸ್ತರಿಸಿದೆ.

ಎಫ್‌ಐಆರ್‌ ರದ್ದು ಕೋರಿ ಪ್ರಭುಶಂಕರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.

ಅರ್ಜಿದಾರರ ವಿರುದ್ಧ ಎಸಿಬಿ ದಾಖಲಿಸಿರುವ ಮೂರು ಎಫ್‌ಐಆರ್‌ ಗಳಿಗೆ ಈ ಹಿಂದೆ ನೀಡಲಾಗಿರುವ ತಡೆ ಆದೇಶವನ್ನೂ ಮುಂದಿನ ವಿಚಾರಣೆ ತನಕ ವಿಸ್ತರಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಠಾಣೆಯ ಪೊಲೀಸರು ದಾಖಲಿಸಿರುವ ಎರಡು ಪ್ರತ್ಯೇಕ
ಎಫ್‌ಐಆರ್‌ಗಳಿಗೂ ತಡೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು