ಶನಿವಾರ, ಜೂಲೈ 11, 2020
23 °C

ಆನ್‌ಲೈನ್‌ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಿ ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆನ್‌ಲೈನ್‌ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ 5 ಸಾವಿರ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದರು.

ಆನ್‌ಲೈನ್‌ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಿ ₹ 666 ಕೋಟಿ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಸಚಿವರಾಗಿ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ‘ದಿನ ನೂರು-ಸಾಧನೆ ಹಲವಾರು’ ಶೀರ್ಷಿಕೆಯುಳ್ಳ ಕಿರುಹೊತ್ತಿಗೆ ಬಿಡುಗಡೆ ಮಾಡಿದರು.

ನೂರು ದಿನಗಳಲ್ಲಿ ಕೃಷಿ ಸಚಿವರು ಮಾಡಿದ ಸಾಧನೆಗಳು ಇಲಾಖೆಯ ಪ್ರಗತಿ, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ತೀರ್ಮಾನಗಳು ಸೇರಿದಂತೆ ನೂರು ದಿನಗಳಲ್ಲಿನ ‌ಸಾಧನೆಗಳನ್ನು ಹೊತ್ತ ಕಿರುಹೊತ್ತಿಗೆ ‘ದಿನ‌ನೂರು- ಸಾಧನೆ ಹಲವಾರು’ ಇದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು