ಶುಕ್ರವಾರ, ಆಗಸ್ಟ್ 7, 2020
24 °C

ಸಿದ್ದರಾಮಯ್ಯ ಕಡತಗಳನ್ನು ನೋಡಲಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌–19ಗೆ ಸಂಬಂಧಿಸಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದು ಎಲ್ಲ ದಾಖಲೆಗಳನ್ನು ಪರಿಶೀಲಿಸಬಹುದು. ಅದಕ್ಕೆ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಯಾವುದೇ ದಾಖಲೆಗಳನ್ನು ಇಟ್ಟುಕೊಳ್ಳದೇ ಹಲವು ದಿನಗಳಿಂದ ಸಿದ್ದರಾಮಯ್ಯ ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ. ಇಷ್ಟು ದಿನ ಅವರ ಟೀಕೆಗಳನ್ನು ಕೇಳಿಕೊಂಡು ಮೌನವಾಗಿದ್ದೆ. ಅವರೇ ಬಂದು ಖರೀದಿಗೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಪರಿಶೀಲಿಸಲಿ ಎಂದು ಸುದ್ದಿಗಾರರಿಗೆ ತಿಳಿಸಿದರು.

ಒಂದು ವೇಳೆ ಖರೀದಿಯಲ್ಲಿ ಯಾವುದೇ ಲೋಪದೋಷ ಆಗಿರುವುದು ಕಂಡು ಬಂದರೆ, ಅಧಿಕಾರಿಗಳಾಗಲಿ, ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೇ ಬಿಡುವುದಿಲ್ಲ. ಸಿದ್ದರಾಮಯ್ಯ ವೃಥಾ ಆರೋಪ ಮಾಡುವುದನ್ನು ಬಿಟ್ಟು ಖುದ್ದಾಗಿ ಎಲ್ಲ ಕಡತಗಳನ್ನು ನೋಡಲಿ  ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು