ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಚಿಂಚೋಳಿ: ಬಾವಗಿ ಭದ್ರೇಶ್ವರ ದರ್ಶನ ಪಡೆದ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಇಲ್ಲಿಗೆ ಸಮೀಪದ ತೆಲಂಗಾಣದ ತಾಂಡೂರಿನಲ್ಲಿರುವ ಪ್ರಸಿದ್ಧ ಬಾವಗಿ ಭದ್ರೇಶ್ವರ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದೇವರ ದರ್ಶನ ಪಡೆದರು. 

ದರ್ಶನ ಬಳಿಕ ಅರ್ಚಕರು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿದ್ದರು. 15 ಸಾವಿರಕ್ಕೂ ಅಧಿಕ ವೀರಶೈವ ಲಿಂಗಾಯತ ಸಮಾಜದ ಜನರು ತಾಂಡೂರಿನಲ್ಲಿದ್ದಾರೆ. 

ವೀರಶೈವ ಲಿಂಗಾಯತರನ್ನು ಹಿಂದುಳಿದ ವರ್ಗ ‘ಎ’ಗೆ ಸೇರಿಸಬೇಕು. ಕಲ್ಯಾಣ ಮಂಟಪದ ಅಗತ್ಯವಿದೆ ಎಂದು ಸಮಾಜದ ಕಾರ್ಯದರ್ಶಿ ಶೇಖರ್ ಮನವಿ ಮಾಡಿದರು

ಶಾಸಕರಾದ ಬಿ.ಜಿ.ಪಾಟೀಲ, ಬಸವರಾಜ ಮತ್ತಿಮೂಡ, ಶಶೀಲ್ ಜಿ.ನಮೋಶಿ, ಸಮಾಜದ ಅಧ್ಯಕ್ಷ ವಾಲಿ ಶಾಂತಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು