ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೆರೆ– ಬರ ಎದುರಿಸಲು ಸರ್ಕಾರ ಸನ್ನದ್ಧ’

ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Last Updated 15 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಅದಕ್ಕೆ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಪ್ರಮುಖವಾಗಿ ಪ್ರಸ್ತಾಪಿಸಿದರು.

ಇಲ್ಲಿನ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಗುರುವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿ, ರಾಜ್ಯ ಕಳೆದ 45 ವರ್ಷಗಳಲ್ಲಿ ಕಂಡರಿಯದ ಪ್ರಕೃತಿ ವಿಕೋಪ ಎದುರಿಸುತ್ತಿದೆ. ಈ ವರ್ಷ ಅರ್ಧ ರಾಜ್ಯ ಜಲಪ್ರಳಯಕ್ಕೆ ಒಳಗಾ
ಗಿದೆ. ಐದು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸರ್ಕಾರ ಸನ್ನದ್ಧ
ವಾಗಿದೆ ಎಂದರು.

‘ಪ್ರವಾಹದಿಂದ ಈವರೆಗೆ 71 ಮಂದಿ ಸಾವಿಗೀಡಾಗಿದ್ದರೆ, 859 ಜಾನುವಾರು ಅಸುನೀಗಿವೆ. 6.97 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ 48 ಗಂಟೆಯೊಳಗಾಗಿ ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ’ ಎಂದು ಹೇಳಿದರು.

ನೆರವಿಗೆ ಮನವಿ: ಪ್ರವಾಹದಿಂದ ಆಗಿರುವ ಒಟ್ಟಾರೆ ಹಾನಿಯನ್ನು ಅಂದಾಜು ಮಾಡುತ್ತಿದ್ದು, ಕೇಂದ್ರ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಿರುವ ಮನವಿ ಜತೆಗೆ ಇತ್ತೀಚಿನ ಮಾಹಿತಿ ಸೇರಿಸಿ, ಹೆಚ್ಚಿನ ನೆರವು ಕೋರಲಾಗುವುದು’ ಎಂದರು.

ಭಾಷಣದ ಮುಖ್ಯಾಂಶಗಳು

lಸಹಕಾರಿ ಬ್ಯಾಂಕ್‌ ಮತ್ತು ಸಹಕಾರ ಸಂಘಗಳಿಂದ ನೇಕಾರರು ಪಡೆದ
₹1 ಲಕ್ಷದವರೆಗಿನ ಸಾಲ ಮನ್ನಾ. ಇದಕ್ಕೆ ₹98.29 ಕೋಟಿ ವೆಚ್ಚ. 29,621 ನೇಕಾರರಿಗೆ ಅನುಕೂಲ.

lಮೀನುಗಾರರು ವಾಣಿಜ್ಯ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿಂದ ಪಡೆದಿರುವ ₹50 ಸಾವಿರವರೆಗಿನ ಸಾಲ ಮನ್ನಾ. ಇದಕ್ಕೆ ₹60.58 ಕೋಟಿ ವೆಚ್ಚ. 23,507 ಮೀನುಗಾರರಿಗೆ ಅನುಕೂಲ.

lಪ್ರಸ್ತುತ 9 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕೈಗಾರಿಕಾ ಕ್ಲಸ್ಟರ್‌ ಅಭಿವೃದ್ಧಿ ಯೋಜನೆ, ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಿಗೂ ವಿಸ್ತರಣೆ

l2019–2024ರ ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ ಪ್ರಸಕ್ತ ವರ್ಷದಿಂದ ಜಾರಿ

lಬೆಂಗಳೂರು ಸರ್ವತೋಮುಖ ಅಭಿವೃದ್ಧಿಗೆ ‘ಬೆಂಗಳೂರು ಅಭಿವೃದ್ಧಿ ಕಾರ್ಯಪಡೆ’ ಬಲವರ್ಧನೆ

ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ

‘ರಾಜ್ಯದಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರ ಪ್ರಾತಿನಿಧ್ಯ ಕಡಿಮೆಯಾಗುತ್ತಿದೆ ಎಂಬ ಕೂಗು ಎದ್ದಿದೆ. ಕನ್ನಡಿಗರಿಗೇ ಉದ್ಯೋಗ ದೊರೆಯಬೇಕೆಂಬುದು ನಮ್ಮ ಸರ್ಕಾರದ ನೀತಿಯಾಗಿದೆ’ ಎಂದು ಯಡಿಯೂರಪ್ಪ ಹೇಳಿದರು.

‘ಕನ್ನಡಿಗರ ಸ್ವಾಭಿಮಾನ, ಗೌರವ ಮತ್ತು ಉದ್ಯೋಗಾವಕಾಶಗಳಿಗೆ ಧಕ್ಕೆ ಬಾರದಂತೆ ಎಚ್ಚರ ವಹಿಸಲು ಬದ್ಧ. ಜೊತೆಗೆ, ಒಕ್ಕೂಟ ತತ್ವದಡಿ ಇತರರಿಗೂ ಅವಕಾಶ ಕಲ್ಪಿಸಲು ಸಿದ್ಧರಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT