ಬೆಂಗಳೂರು: ಕೊರೊನಾ ವೈರಸ್ಹಿನ್ನೆಲೆಯಲ್ಲಿ ಲಾಕ್‌ಡೌನ್ ಆಗಿರುವ ಕರ್ನಾಟಕಕ್ಕೆಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಬಡವರ ಬಂಧು ಯೋಜನೆಯಡಿ ಪಡೆದಿರುವ ಸಾಲ ಮನ್ನಾ, ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ ತಲಾ ₹1500 ಸಹಾಯಧನ,2ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡುವುದೂ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಮುಂಗಡವಾಗಿಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಬಡವರ ಬಂಧು ಯೋಜನೆಯಡಿ ಪಡೆಯಲಾಗಿರುವ ₹13.50ಕೋಟಿ ಸಾಲ ಮನ್ನಾ ಮಾಡಲಾಗುವುದು.2ತಿಂಗಳ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಯನ್ನು ತಕ್ಷಣವೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. 2.50ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ ₹ 1500 ಪ್ರತಿ ತಿಂಗಳು ನೀಡಲಾಗುತ್ತದೆ.2ತಿಂಗಳ ಪಡಿತರ ಒಂದೇ ಸಲ ವಿತರಣೆ ಮಾಡಲು ನಿರ್ಧರಿಸಲಾಗಿದೆ ಎಂದುಸಿಎಂ ಹೇಳಿದರು.

ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ 2ನೇ ಹಂತದಲ್ಲಿದೆ. 3ನೇ ಹಂತಕ್ಕೆ ಹರಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಒಂದು ತಿಂಗಳ ಹಿಂದೆ ಕೊಂಚ ನಿರ್ಲಕ್ಷ್ಯ ಆಗಿದ್ದು ನಿಜ. ಈಗ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.