ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ ಬೌನ್ಸ್: ರೈತರನ್ನು ಬಂಧಿಸದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Last Updated 12 ನವೆಂಬರ್ 2019, 20:07 IST
ಅಕ್ಷರ ಗಾತ್ರ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ರೈತರನ್ನು ಬಂಧಿಸದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಂಗಳವಾರರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದ ರೈತ ನಿಯೋಗದ ಜತೆ ಚರ್ಚೆ ನಡೆಸಿದ ಸಮಯದಲ್ಲಿ ಈ ಸೂಚನೆ ನೀಡಿದ್ದಾರೆ.

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಮೊತ್ತದಲ್ಲಿ ಮನೆ ನಿರ್ಮಾಣ, ನೆರೆಗೆ ತುತ್ತಾಗಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ, ಡಾ.ಸ್ವಾಮಿನಾಥನ್ ವರದಿಯಂತೆ ಬೆಳೆನಷ್ಟ ಪರಿಹಾರ, ಪ್ರವಾಹದಿಂದ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ, ಹಾಳಾದ ಭೂಮಿಗೆ ಪರ್ಯಾಯ ಜಮೀನು ನೀಡಬೇಕು ಎಂದು ರೈತರು ಆಗ್ರಹಿಸಿದರು.

ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ, ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ₹1 ಲಕ್ಷ ಕೋಟಿ ನಿಗದಿ, 60 ವರ್ಷ ತುಂಬಿದ ರೈತರಿಗೆ ಪ್ರತಿ ತಿಂಗಳು ₹10 ಸಾವಿರ ಮಾಸಾಶನ, ಲೀಟರ್ ಹಾಲಿಗೆ ₹50, ಟನ್ ಕಬ್ಬಿಗೆ ₹3500, ರೇಷ್ಮೆ ಗೂಡಿಗೆ ಕೆ.ಜಿ.ಗೆ 500 ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿದರು.

ಎತ್ತಿನಹೊಳೆ, ಮಹದಾಯಿ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT