ಸೋಮವಾರ, ಜನವರಿ 27, 2020
22 °C
1.09 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ (1,09,916) ಉಚಿತ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಂಕೇತಿಕವಾಗಿ 8 ಮಂದಿಗೆ ಲ್ಯಾಪ್‌ಟಾಪ್‌ ವಿತರಿಸಿದರು. 

ಜತೆಗೆ ಯುವ ಸಬಲೀಕರಣ ಕೇಂದ್ರಗಳನ್ನೂ ಉದ್ಘಾಟಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವೇದಾ ಕೃಷ್ಣಮೂರ್ತಿ (ಮಹಿಳಾ ಕ್ರಿಕೆಟ್‌), ವಿವೇಕಾನಂದ ಹಳ್ಳಿಗೆರೆ (ಬೌನ್ಸ್‌ ಸ್ಕೂಟರ್‌ ಸಂಸ್ಥಾಪಕ), ರಾಧಾ ವೆಂಕಟೇಶ್‌ (ಅಂಗವಿಕಲ ಕ್ರೀಡಾಳು), ಪ್ರಣವ್‌ ವಿಠಲಪತಿ (ಸಾಫ್ಟ್‌ವೇರ್‌) ಅವರನ್ನು ಸನ್ಮಾನಿಸಲಾಯಿತು. 

ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬೆಂಗಳೂರು ರಾಮಕೃಷ್ಣ ಮಠದ ಸ್ವಾಮಿ ಮಂಗಲನಾಥಾನಂದಜಿ ಮಹಾರಾಜ್‌ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು