ಗುರುವಾರ , ಜನವರಿ 23, 2020
20 °C
ಮಂಗಳೂರಿಗೆ ತೆರಳಿದ ಮುಖ್ಯಮಂತ್ರಿ

ಮಂಗಳೂರು ಭೇಟಿಗೆ ಸಿದ್ದರಾಮಯ್ಯಗೆ ನಿರ್ಬಂಧ ಹೇರಿಲ್ಲ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರಿಗೆ ತೆರಳುವುದಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ನಿರ್ಬಂಧ ಹೇರಿಲ್ಲ. ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಎಂತಹ ಪರಿಸ್ಥಿತಿ ಇತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಜತೆಗೆ ಮಂಗಳೂರಿಗೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ‘ಮಂಗಳೂರಿಗೆ ತೆರಳಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲಿದ್ದೇವೆ. ಬಳಿಕ ಉಡುಪಿಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಮತ್ತೆ ಮಂಗಳೂರಿಗೆ ಬರಲಿದ್ಗಿದೇವೆ’ ಎಂದು ತಿಳಿಸಿದರು.

ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ವಿಷಯಗಳನ್ನು ಮಂಗಳೂರಿನಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು