ಬೆಂಗಳೂರು: ಕಂಟೇನ್ ಮೆಂಟ್ (ನಿರ್ಬಂಧ ವಲಯ) ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಶನಿವಾರ ವಿಡಿಯೋ ಸಂವಾದ ನಡೆಸಿದರು.

ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆಗೂ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು.

ಸಂವಾದದ ಮುಖ್ಯಾಂಶಗಳು

* ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆ ಆರಂಭಿಸಬೇಕು

* ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ

* ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ. ಹೊರ ಜಿಲ್ಲೆಗಳಿಂದ ಬಂದದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕು

* ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನ

* ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.