ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮೆಯಾಚಿಸದಿದ್ದರೆ ಹಕ್ಕುಚ್ಯುತಿ ಮಂಡನೆ: ಸಿದ್ದರಾಮಯ್ಯಗೆ ಬಿಎಸ್‌ವೈ ಎಚ್ಚರಿಕೆ

ಸ್ಪೀಕರ್ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ
Last Updated 26 ಅಕ್ಟೋಬರ್ 2019, 6:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸ್ಪೀಕರ್ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆಯಾಚಿಸಬೇಕು, ಇಲ್ಲವಾದರೆ ಸದನದಲ್ಲಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸ್ಪೀಕರ್ ಬಗ್ಗೆ ಹಗುರವಾಗಿ, ಮನಬಂದಂತೆ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕಾಂಗ್ರೆಸ್ ನಾಯಕತ್ವ ಇಲ್ಲದ ಪಕ್ಷ, ಶೀಘ್ರ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗಲಿದೆ. ವಿಧಾನಸಭೆ ಉಪ ಚುನಾವಣೆ ಸಿದ್ಧತೆ ಕುರಿತು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದರು. ಅತಿವೃಷ್ಟಿಯಿಂದ ತೊಂದರೆಗೆ ಒಳಗಾದವರಿಗೆ ಈ ಹಿಂದಿನಂತೆ ಸೂಕ್ತ ಸೌಲಭ್ಯ, ಪರಿಹಾರ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT