ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಣರಾಯಿ ವಿಜಯನ್‌ಗೆ ಥ್ಯಾಂಕ್ಸ್‌ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ

Last Updated 18 ಫೆಬ್ರುವರಿ 2020, 5:38 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೈದ್ಯಕೀಯ ಮತ್ತು ಜೈವಿಕ ತ್ಯಾಜ್ಯ ಎಸೆಯುತ್ತಿರುವ ಕೇರಳಿಗರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ನಮ್ಮ ಜಿಲ್ಲೆಗಳಲ್ಲಿವೈದ್ಯಕೀಯ, ಜೈವಿಕ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವ ಹಾಗೂ ತ್ವರಿತ ಪ್ರತಿಕ್ರಿಯೆ ನೀಡಿದ ಕೇರಳ ಮುಖ್ಯಮಂತ್ರಿಪಿಣರಾಯಿ ವಿಜಯನ್ ಅವರಿಗೆ ಧನ್ಯವಾದಗಳು’ ಎಂದು ಉಲ್ಲೇಖಿಸಿದ್ದಾರೆ.

‘ಗಡಿ ಭಾಗದ ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿಕೇರಳದವರುವೈದ್ಯಕೀಯ, ಜೈವಿಕ ತ್ಯಾಜ್ಯ ಎಸೆಯುತ್ತಿದ್ದಾರೆ ಎಂಬ ವರದಿಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ವ್ಯಕ್ತಿಗತವಾಗಿ ಮತ್ತು ಯಾವುದೇ ಸಂಸ್ಥೆನಡೆಸುವ ರಹಸ್ಯ ಚಟುವಟಿಕೆ ಬಗ್ಗೆ ನಿಗಾವಹಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಇಲಾಖೆ ಮತ್ತು ಆಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆಲೆ ಮನೆಗಳಲ್ಲಿ ಇಂಧನವಾಗಿ ಇಂಥ ತ್ಯಾಜ್ಯವನ್ನು ಇಂಧನವಾಗಿ ಬಳಸದಂತೆಯೂ ಸೂಚನೆ ನೀಡಿದ್ದೇನೆ’ ಎಂದು ಯಡಿಯೂರಪ್ಪ ಹೇಳಿದ್ದಾರೆ. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವುದಾಗಿಯೂ ಅವರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT