ಕುಮಾರಸ್ವಾಮಿಯವರಿಂದ ಸೇಡಿನ ರಾಜಕಾರಣ, ಎಸ್ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ: ರಾಮುಲು

7

ಕುಮಾರಸ್ವಾಮಿಯವರಿಂದ ಸೇಡಿನ ರಾಜಕಾರಣ, ಎಸ್ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ: ರಾಮುಲು

Published:
Updated:

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಅಧೀನದಲ್ಲಿರುವ ಕಾರಣ ಆಡಿಯೊ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಬಿ.ಶ್ರೀರಾಮುಲು ಆರೋಪಿಸಿದರು.

ಮಂಗಳವಾರ ಕಲಾಪ ಆರಂಭಕ್ಕೂ ಮುನ್ನ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಅವರ(ಕುಮಾರಸ್ವಾಮಿ) ಹೆಸರೂ ಕೇಳಿಬಂದಿರುವುದರಿಂದ ಮುಖ್ಯಮಂತ್ರಿಗಳು ಮೊದಲು ರಾಜೀನಾಮೆ ನೀಡಲಿ. ಬಳಿಕ ತನಿಖೆಗೆ ಸಹಕರಿಸುತ್ತೇವೆ ಎಂದು ಹೇಳಿದರು.

ನಮಗೆ ಎಸ್‌ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 10

  Happy
 • 2

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !