ಮೈತ್ರಿ ನಾಯಕರ ಕಚ್ಚಾಟ ಉಲ್ಬಣಗೊಂಡಿದೆ: ಯಡಿಯೂರಪ್ಪ 

ಬುಧವಾರ, ಮೇ 22, 2019
34 °C

ಮೈತ್ರಿ ನಾಯಕರ ಕಚ್ಚಾಟ ಉಲ್ಬಣಗೊಂಡಿದೆ: ಯಡಿಯೂರಪ್ಪ 

Published:
Updated:

ಕಲಬುರ್ಗಿ: ‘ಸಿದ್ದರಾಮಯ್ಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುವುದಾಗಿ ಹೇಳಿದ್ದಾರೆ. ಎರಡು ಪಕ್ಷಗಳ ನಾಯಕರ ಕಚ್ಚಾಟದಿಂದ ಜನರಿಗೆ ಬೇಸರವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

‘ಲೋಕಸಭಾ ಚುನಾವಣೆಯಲ್ಲಿ ಒಬ್ಬರಿಗೊಬ್ಬರು ಚೂರಿ ಹಾಕಿ ತಮ್ಮ ಬೇಳೆ ಬೇಯಿಸಿಕೊಂಡಿದ್ದಾರೆ.  ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಪಕ್ಷಕ್ಕೆ ಹಿನ್ನಡೆಯಾಗುತ್ತೆ ಅಂತ ಗೊತ್ತಾಗಿದ್ದು, ಫಲಿತಾಂಶದ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣವಾಗುತ್ತದೆ. ಮುಂದೆ ಏನು ಬೇಕಾದರೂ ಆಗಬಹುದು’ ಎಂದು ಹೇಳಿದರು.

ಇದನ್ನೂ ಓದಿ... ​‘ಯಡಿಯೂರಪ್ಪ ಅವರನ್ನು ಯಾರೂ ನಂಬಲ್ಲ; ಜನರು ಆಶೀರ್ವಾದ ಮಾಡಿದರೆ ಸಿಎಂ ಆಗಬಾರದೇಕೆ‌’

ಫಲಿತಾಂಶದ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕೆ.ಸಿ. ವೇಣುಗೋಪಾಲ್‌ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಅವರು, ‘ವೇಣುಗೋಪಾಲ್‌ಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ?, ಕರ್ನಾಟಕದ ಯಾವ ಮೂಲೆಗೆ ಹೋಗಿ ಬಂದಿದ್ದಾರೆ ? ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗಲು ತಲೆಕೆಟ್ಟಿದೆಯಾ?  ಎಂದು ಪ್ರಶ್ನಿಸಿದರು. 

ಪ್ರಿಯಾಂಕ್ ಖರ್ಗೆ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಮೊದಲು ಅವರು ಚುನಾವಣೆಯಲ್ಲಿ ಗೆದ್ದು ತೋರಿಸಲಿ.  ನಾವು ಕಲಬುರ್ಗಿ ಮತ್ತು ಚಿಂಚೋಳಿಯಲ್ಲಿ ಗೆದ್ದೆ ಗೆಲ್ಲುತ್ತೇವೆ. ಹಣದ ಚೀಲ ತುಂಬಿಕೊಂಡು ಬಂದು ಮೈತ್ರಿ ನಾಯಕರು ಕ್ಷೇತ್ರದಲ್ಲಿ ಕೂತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ... ‘ಜಿಟಿಡಿ ಇತ್ತೀಚೆಗೆ ನನ್ನ ವಿರುದ್ಧ ಮಾತನಾಡಿಲ್ಲ. ಆದರೆ...’ –ಸಿದ್ದರಾಮಯ್ಯ

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !