ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀವ್ರ ಚರ್ಚೆಗೆ ಗ್ರಾಸವಾದ ಬಿಎಸ್‌ವೈ–ಕಾಂಗ್ರೆಸ್‌ ನಾಯಕ ಪ್ರಕಾಶ್‌ ಹುಕ್ಕೇರಿ ಭೇಟಿ

Last Updated 24 ನವೆಂಬರ್ 2019, 7:07 IST
ಅಕ್ಷರ ಗಾತ್ರ

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ ಮತ್ತು ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರು ಭಾನುವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅರ್ಧ ಗಂಟೆಗೂ ಹೆಚ್ಚಿನ ಸಮಯ ಅವರು ಮುಖ್ಯಮಂತ್ರಿ ಜೊತೆ ಚರ್ಚಿಸಿದರು. ಭೇಟಿ ಮುನ್ನ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘‌ಉಪಾಹಾರಕ್ಕೆಂದು ಹೋಟೆಲ್‌ಗೆ ಬಂದಿದ್ದೇನೆ’ ಎಂದಿದ್ದರು.

ಭೇಟಿ ಬಳಿಕ, ‘ಚಿಕ್ಕೋಡಿ ಭಾಗದಲ್ಲಿ ನೆರೆ ಸಂತ್ರಸ್ತರಿಗೆ ಸಮರ್ಪಕವಾಗಿ ಪರಿಹಾರ ಸಿಕ್ಕಿಲ್ಲ. ಮನೆ ಹಾನಿ ಪರಿಹಾರ ನೀಡಲು ಸಿದ್ಧಪಡಿಸಿದ ಪಟ್ಟಿಯಲ್ಲಿ ಬಹಳ ಮಂದಿಯ ಹೆಸರುಗಳು ಬಿಟ್ಟು ಹೋಗಿವೆ. ಈ ಕುರಿತು ಮನವಿ ಕೊಡಲು ಬಂದಿದ್ದೆ. ಯಾವುದೇ ರಾಜಕೀಯ ಚರ್ಚಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಪಕ್ಷ ಮನ್ನಣೆ ನೀಡಿಲ್ಲ. ಇದರಿಂದಾಗಿ ಅಸಮಾಧಾನಗೊಂಡಿರುವ ಅವರು ಉಪ ಚುನಾವಣಾ ಪ್ರಚಾರ ಕಣದಲ್ಲೂ ಕಾಣಿಸಿಕೊಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಪ್ರಕಾಶ್‌ ಹುಕ್ಕೇರಿಮುಖ್ಯಮಂತ್ರಿ ಭೇಟಿಯಾಗಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT