ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಲದಂತೆ ಎಚ್ಚರ ವಹಿಸಲಾಗಿದೆ ಎಂದು ಒಡಿಶಾ ಮುಖ್ಯಮಂತ್ರಿಯವರಿಗೆ ಹಾಗೂ ಕೇಂದ್ರದ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.

ಇದನ್ನೂ ಓದಿ:ಬೆಂಗಳೂರು: ಊರಿಗೆ ಮರಳಲು ವಲಸೆ ಕಾರ್ಮಿಕರ ಕಾತರ, ಮೆಜೆಸ್ಟಿಕ್ನಲ್ಲಿ ಜನಸಂದಣಿ

ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.

ಇದನ್ನೂ ಓದಿ:ಊರಿಗೆ ಕಳುಹಿಸಿಕೊಡಿ ಎಂದುಮೆಟ್ರೊ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಒಡಿಶಾ ರಾಜ್ಯಕ್ಕೆ ಹಿಂತಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.