ಸೋಮವಾರ, ಏಪ್ರಿಲ್ 6, 2020
19 °C

ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಬಿಎಸ್ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆ(ಕಿಮ್ಸ್‌) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ, ಮಾಜಿ ರಾಜ್ಯಸಭಾ ಸದಸ್ಯ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಪು ಆರೋಗ್ಯ ದಿನದಿಂದ ಕ್ಷೀಣಿಸುತ್ತಿದೆ. ಸದ್ಯ ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.

‘ರಾಜ್ಯ ಸರ್ಕಾರವು 2017ನೇ ಸಾಲಿನಲ್ಲಿ ಪಾಪು ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಬಸವ ಪುರಸ್ಕಾರವನ್ನು ಕಾರಣಾಂತರದಿಂದ ಇದುವರೆಗೂ ಅವರು ಸ್ವೀಕರಿಸಿಲ್ಲ. ಇನ್ನೆರಡು ದಿನದಲ್ಲಿ ಪುರಸ್ಕಾರದೊಂದಿಗೆ ಪ್ರಶಸ್ತಿ ಮೊತ್ತ ₹ 10 ಲಕ್ಷವನ್ನು ಅವರಿಗೆ ತಲುಪಿಸಲಾಗುವುದು ಹಾಗೂ ಆಸ್ಪತ್ರೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು