ಉಡುಪಿ–ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ: ಯಡಿಯೂರಪ್ಪ

ಶನಿವಾರ, ಮಾರ್ಚ್ 23, 2019
31 °C
ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಎಸ್‌ವೈ, ಶೋಭಾ ಕರಂದ್ಲಾಜೆ ಭೇಟಿ

ಉಡುಪಿ–ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ: ಯಡಿಯೂರಪ್ಪ

Published:
Updated:

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು  ಭೇಟಿ ನೀಡಿ ಶೃಂಗೇರಿ ಶಾರದಾ ಮಠದಲ್ಲಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಶೃಂಗೇರಿಯಲ್ಲಿ ಗುರುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಬಿ.ಎಸ್.ಯಡಿಯೂರಪ್ಪ, 'ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾಕರಂದ್ಲಾಜೆ ಅವರೇ ಕಣಕ್ಕಿಳಿಯಲಿದ್ದಾರೆ'  ಎಂದು ಪ್ರತಿಕ್ರಿಯಿಸಿದರು.

'ಈ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ. ಶೋಭಾ ಅವರು ಗೆಲುವು ಸಾಧಿಸುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಅಭ್ಯರ್ಥಿಗಳ ಅಖೈರು ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. 18ರಂದು ದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ' ಎಂದು ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 6

  Happy
 • 3

  Amused
 • 1

  Sad
 • 2

  Frustrated
 • 6

  Angry

Comments:

0 comments

Write the first review for this !