ಬುಧವಾರ, ಏಪ್ರಿಲ್ 8, 2020
19 °C

ರೈತರ ಸಾಲ ಮನ್ನಾ ಬಿಎಸ್‌ವೈ ತೀರ್ಮಾನ: ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ರೈತರ ಸಾಲ ಮನ್ನಾ ಮಾಡಲು ಮತ್ತು ವಿಶೇಷವಾದ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಇಲ್ಲಿ ಬುಧವಾರ ನಡೆದ ಪಕ್ಷದ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘2ನೇ ಬಾರಿ ಮುಖ್ಯಮಂತ್ರಿಯಾದಾಗ ನೇಕಾರರ ಸಾಲ ಮನ್ನಾ ಮಾಡಿ ಅವರ ಕಣ್ಣೀರು ಒರೆಸಿದ್ದರು. ಯಡಿಯೂರಪ್ಪ, ಜನರ ಕಣ್ಣೀರು ಒರೆಸುವ ಮುಖ್ಯಮಂತ್ರಿ’ ಎಂದರು.

‘ಬಿಜೆಪಿ ಸರ್ಕಾರ ಈಗ ಬೀಳುತ್ತದೆ, ಆಗ ಬೀಳುತ್ತದೆ ಎಂದು ವಿರೋಧಪಕ್ಷದವರು ಕಾಯುತ್ತಿದ್ದಾರೆ. ಆದರೆ, ಹಾಗೇನೂ ಆಗುವುದಿಲ್ಲ. ಯಡಿಯೂರಪ್ಪ ಅಧಿಕಾರದ ಅವಧಿ ಪೂರೈಸಲಿದ್ದಾರೆ. ಮುಂದಿನ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು