ಸೋಮವಾರ, ಆಗಸ್ಟ್ 8, 2022
21 °C

ಬಿಎಸ್‌ವೈಗೆ ದಂ ಇಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೇಳು ವುದಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪಗೆ ದಂ ಇಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ಕುಟುಕಿದರು.

ಜಿಎಸ್‌ಟಿ ಹಣ ಸೇರಿದಂತೆ 15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಬರಬೇಕಾಗಿದ್ದ ಅನುದಾನವನ್ನು ಕೇಳುವುದಕ್ಕೂ ಅವರಿಗೆ ಆಗುತ್ತಿಲ್ಲ ಎಂದು ಹರಿಹಾಯ್ದ ಅವರು, ‘ಮೋದಿ ತಾಳಕ್ಕೆ ಯಡಿಯೂರಪ್ಪ ಒಬ್ಬರೇ ಅಲ್ಲ, ದೇಶದ ಬಹುತೇಕರು ಕುಣಿಯುತ್ತಿ
ದ್ದಾರೆ’ ಎಂದು ಟೀಕಿಸಿದರು.

‘ಎಪಿಎಂಸಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಆದರೆ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿ ಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಇದರ ವಿರುದ್ಧ ರಾಜಕೀಯ ಹೋರಾಟ ನಿಲ್ಲದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು