ಶುಕ್ರವಾರ, ನವೆಂಬರ್ 15, 2019
20 °C

ಬಿಎಸ್‌ವೈ– ಎಚ್‌ಡಿಕೆ ಮುಖಾಮುಖಿ

Published:
Updated:

ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಪತನವಾಗಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮದುವೆ ಸಮಾರಂಭವೊಂದರಲ್ಲಿ ಮುಖಾಮುಖಿಯಾಗಿದ್ದಾರೆ.

ಇಬ್ಬರೂ ನಾಯಕರು ನಗುಮೊಗದಿಂದಲೇ ಪರಸ್ಪರ ಹಸ್ತಲಾಘವಮಾಡಿ ಉಭಯ ಕುಶಲೋಪರಿ ನಡೆಸಿದರು. ವಧು–ವರರಿಗೆ ಶುಭಾಶಯ ಹೇಳಿದ ನಂತರ ಕೆಲಸಮಯ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಪ್ರತಿಕ್ರಿಯಿಸಿ (+)