ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ

Last Updated 8 ಫೆಬ್ರುವರಿ 2019, 20:34 IST
ಅಕ್ಷರ ಗಾತ್ರ

ಬೆಂಗಳೂರು:ಕೈಗಾರಿಕೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಈ ಸಾಲಿನ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಕೃಷಿ ಕೈಗಾರಿಕೆಗಳು, ಗುಡಿ ಕೈಗಾರಿಕೆಗಳು, ಕೈಗಾರಿಕಾ ವಲಯದಲ್ಲಿ ಮಹಿಳೆಯರ ಸ್ವಾವಲಂಬನೆ ಹಾಗೂ ಹಲವು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದಾಗಿ ಸರ್ಕಾರ ಘೋಷಿಸಿದ್ದು, ಅನುದಾನ ಮೀಸಲಿರಿಸಿದೆ.

ಹಲವು ಹೊಸ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾರ್ಯಕ್ರಮಗಳು/ಯೋಜನೆಗಳು/ಕಾಮಗಾರಿಗಳಿಗೆ ಮತ್ತಷ್ಟು ಹಣ ಮೀಸಲಿರಿಸಲಾಗಿದೆ.

ಬಂಡವಾಳ ಆಕರ್ಷಣೆಗೆ ಹೊಸ ಉದ್ದಿಮೆ ನೀತಿ
ಸದ್ಯ ಚಾಲ್ತಿಯಲ್ಲಿರುವ 2014–19ರ ಅವಧಿಯ ಕೈಗಾರಿಕಾ ನೀತಿ 2019ರ ಸೆಪ್ಟೆಂಬರ್‌ಗೆ ಅಂತ್ಯವಾಗಲಿದೆ. ಹೀಗಾಗಿ ರಾಜ್ಯದ ಸಮಗ್ರ ಕೈಗಾರಿಕಾ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಹಿಂದುಳಿದ ಪ್ರದೇಶಗಳು ಮತ್ತು ಟೈರ್‌ 2 ಮತ್ತು ಟೈರ್‌ 3 ಕೇಂದ್ರಗಳಿಗೆ ಬಂಡವಾಳ ಆಕರ್ಷಿಸುವ ಮತ್ತು ವಿನೂತನ ತಂತ್ರಜ್ಞಾನಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶಗಳಿರುವ ವಲಯಗಳಿಗೆ ಆದ್ಯತೆ ನೀಡಿ ಹೊಸ ಕೈಗಾರಿಕಾ ನೀತಿ ತರಲು ಸರ್ಕಾರ ಉದ್ದೇಶಿಸಿದೆ.

ಹೊಸ ಕೈಗಾರಿಕಾ ನೀತಿ

ಸದ್ಯ ಚಾಲ್ತಿಯಲ್ಲಿರುವ 2014–19ರ ಅವಧಿಯ ಕೈಗಾರಿಕಾ ನೀತಿ 2019ರ ಸೆಪ್ಟೆಂಬರ್‌ಗೆ ಅಂತ್ಯವಾಗಲಿದೆ. ಹೀಗಾಗಿ ರಾಜ್ಯದ ಸಮಗ್ರ ಕೈಗಾರಿಕಾ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಹಿಂದುಳಿದ ಪ್ರದೇಶಗಳು ಮತ್ತು ಟೈರ್‌ 2 ಮತ್ತು ಟೈರ್‌ 3 ಕೇಂದ್ರಗಳಿಗೆ ಬಂಡವಾಳ ಆಕರ್ಷಿಸುವ ಮತ್ತು ವಿನೂತನ ತಂತ್ರಜ್ಞಾನಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶಗಳಿರುವ ವಲಯಗಳಿಗೆ ಆದ್ಯತೆ ನೀಡಿ ಹೊಸ ಕೈಗಾರಿಕಾ ನೀತಿ ತರಲು ಸರ್ಕಾರ ಉದ್ದೇಶಿಸಿದೆ.

ಕಾಂಪಿಟ್‌ ವಿತ್ ಚೈನಾ

2019-20ರಲ್ಲಿ ಕಾಂಪಿಟ್‌ ವಿತ್ ಚೈನಾ ಯೋಜನೆ ಅನುಷ್ಠಾನಕ್ಕೆ₹110 ಕೋಟಿ ಅನುದಾನ ಮೀಸಲಿಡಲಾಗಿದೆ. ಕೌಶಲ ಆಧರಿತ ಉದ್ಯಮಗಳ ಸ್ಥಾಪನೆ ಮೂಲಕ ಚೀನಾದ ಕಂಪನಿಗಳೊಂದಿಗೆ ಪೈಪೋಟಿ ನಡೆಸುವುದು, ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ನೆರವಾಗುವುದು ಯೋಜನೆಯ ಮೂಲ ಉದ್ದೇಶವಾಗಿದೆ.

ಯೋಜನೆಯಡಿ 9 ಜಿಲ್ಲೆಗಳಲ್ಲಿ 9 ಕೈಗಾರಿಕಾ ಕ್ಲಸ್ಟರ್‌ಗಳು ಸ್ಥಾಪನೆಯಾಗಲಿವೆ. ಇದಕ್ಕೆ ಸಂಬಂಧಿಸಿದಂತೆ ಆಯಾ ಉದ್ಯಮ ವಲಯಗಳ ವಿಷನ್‌ ಗ್ರೂಪ್‌ಗಳನ್ನು ರಚಿಸಲಾಗಿದೆ. ಇವುಗಳು ನೀಡುವ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

ಕೊಪ್ಪಳ, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪನೆಗೆ ಹೂಡಿಕೆದಾರರು ಮುಂದಾಗಿದ್ದಾರೆ. ನಾಲ್ಕೂವರೆ ವರ್ಷದಲ್ಲಿ ಈ 9 ಜಿಲ್ಲೆಗಳಲ್ಲಿ ತಲಾ ಒಂದು ಲಕ್ಷದಂತೆ 9 ಲಕ್ಷ ಉದ್ಯೋಗ ಸೃಷ್ಟಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

ಮೂಲಸೌಕರ್ಯ ಅಭಿವೃದ್ಧಿ ವಿಕೇಂದ್ರೀಕರಣ

*₹ 1,325 ಕೋಟಿನಗರೋತ್ಥಾನ ಹಂತ–3ರಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ

ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆ

* ₹ 150 ಕೋಟಿ ಕಲಬುರಗಿ, ಮೈಸೂರು ಹಾಗೂ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಗಳಿಗೆ ತಲಾ ಮೊತ್ತ‌ ಮೀಸಲು

* ₹ 125 ಕೋಟಿ ಬೆಳಗಾವಿ, ಬಳ್ಳಾರಿ, ತುಮಕೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ ಮತ್ತು ವಿಜಯಪುರ ಮಹಾನಗರ ಪಾಲಿಕೆಗಳಿಗೆ ತಲಾ ಮೊತ್ತ

* ₹ 10,000 ಕೋಟಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿ ಒಟ್ಟು 7,940 ಕಿ.ಮೀ ಉದ್ದದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಮೀಸಲಿರಿಸಿದ ಹಣ

* ₹ 5,690 ಕೋಟಿ ರಸ್ತೆ ಮತ್ತು ಸೇತುವೆಗಳ ಸುಧಾರಣೆ ಮತ್ತು ನವೀಕರಣ ಕಾಮಗಾರಿಕೆಗಳಿಗೆ

* 1,317ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ‘ಶಾಲಾ ಸಂಪರ್ಕ ಸೇತು’ ಯೋಜನೆಯಡಿ ಕಿರು ಸೇತುವೆಗಳನ್ನು ಪೂರ್ಣಗೊಳಿಸಲು ಕ್ರಮ

* ₹ 100 ಕೋಟಿ ರಸ್ತೆಗಳ ಪಕ್ಕದಲ್ಲಿ ಬರುವ ಕೆರೆಗಳು, ನಾಲೆಗಳು ಹಾಗೂ ಇತರೆ ಜಲಮೂಲಗಳ ಬಳಿ ಸುರಕ್ಷತಾ ಬ್ಯಾರಿಯರ್ ಅಳವಡಿಸಲು ಅನುದಾನ

* ₹ 70 ಕೋಟಿ 40 ರಸ್ತೆ ಮೇಲುಸೇತುವೆ / ಕೆಳಸೇತುವೆಗೆ ಭೂಸ್ವಾಧೀನ ಹಾಗೂ ನಿರ್ಮಾಣಕ್ಕೆ ಅನುದಾನ

ಮುಖ್ಯಾಂಶಗಳು

* ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ 3 ವರ್ಷದೊಳಗೆ ಪೂರ್ಣ ಪ್ರಮಾಣದಲ್ಲಿ ಬೃಹತ್ ಮಳೆ ನೀರು ಕಾಲುವೆಗಳ ಪುನರ್‌ ನಿರ್ಮಾಣಕ್ಕೆ ಕ್ರಮ

* ನೀರು ಸಂಸ್ಕರಣಾ ಘಟಕಗಳು ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಸೌರ ವಿದ್ಯುತ್ ಸ್ಥಾವರ ಸ್ಥಾಪನೆ

* ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಮೆಟ್ರೋ ರೈಲು ಯೋಜನೆ ಬಗ್ಗೆ ಪೂರ್ವ ಕಾರ್ಯ ಸಾಧ್ಯತಾ ವರದಿ ತಯಾರಿಕೆ ಪರಿಶೀಲನೆ

* ಇವನ್ನೂ ಓದಿ...

*ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ

* ‘ಉಕ್ಕುವ ಹಾಲಿಗೆ ನೀರು ಚಿಮುಕಿಸಿದಂತೆ’

*ಅನ್ನದಾತನಿಗೆ ಹತ್ತಾರು ಯೋಜನೆ, ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ಯೋಜನೆ

*ಬಜೆಟ್‌: ಯಾರು ಏನಂತಾರೆ?

*ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ

*ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ

*ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ: ಯಡಿಯೂರಪ್ಪ

*ಸಾಲ ಮನ್ನಾಕ್ಕೆ ಇನ್ನೂ ಹಣ ಕೊಡುವೆ: ಕುಮಾರಸ್ವಾಮಿ

*ಬೆಂಗಳೂರೇ ಮೊದಲು; ಉಳಿದವು ನಂತರ...

*ಪ್ರತಿಭಟನೆ ಮಧ್ಯೆಯೇ ಬಜೆಟ್ ಭಾಷಣ

*ಬಜೆಟ್‌ನಲ್ಲಿ ಜಿಲ್ಲಾವಾರು ಹಂಚಿಕೆ; ಸಮತೋಲನದ ಸರ್ಕಸ್

*ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ

*ಮತ ಫಸಲಿಗಾಗಿ ಕುಮಾರ ಬಿತ್ತನೆ

*ವಿಶ್ವವಿಖ್ಯಾತ ತಾಣವಾಗಿ ಬಾದಾಮಿ ಅಭಿವೃದ್ಧಿ

*ಸಹಸ್ರ ಶಾಲೆಗಳ ಸ್ಥಾಪನೆ

*ಸ್ವಾಮೀಜಿ ಊರುಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳು

*ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ

*ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ

*‘ಮಾತೃಶ್ರೀ’ ಯೋಜನೆ ಸಹಾಯಧನ ಹೆಚ್ಚಳ

*ಆನ್‌ಲೈನ್‌ ಮೂಲಕ ಸಿಇಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್‌ ಅಂಕಪಟ್ಟಿ

*ಬಜೆಟ್‌ನಲ್ಲಿ ಮಠಮಾನ್ಯಗಳ ತೃಪ್ತಿಪಡಿಸುವ ಯತ್ನ

*ಬಜೆಟ್‌: ಯಾರು ಏನಂತಾರೆ?

*ಚಲನಶೀಲ ಬೆಂಗಳೂರಿಗೆ ‘ಮತ್ತೊಂದು ಕಾವೇರಿ’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT