ಬಜೆಟ್ ಮಂಡನೆ ಅನಿವಾರ್ಯ: ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ 

7

ಬಜೆಟ್ ಮಂಡನೆ ಅನಿವಾರ್ಯ: ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ 

Published:
Updated:

ಚಿಕ್ಕಬಳ್ಳಾಪುರ: ‘ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಬಜೆಟ್ ಮಂಡನೆ ಅನಿವಾರ್ಯವಾಗಿದೆ. ಬಜೆಟ್ ಮಂಡನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಕರಾರು ಇಲ್ಲ.  ಈ ಹಿಂದಿನ ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಉಳಿಸಿಕೊಂಡೇ ಬಜೆಟ್ ಮಂಡಿಸಲು ಸಿದ್ಧತೆ ನಡೆದಿದೆ’ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ತಿಳಿಸಿದರು. 

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾರವಿಲ್ಲ. 100 ಶಾಸಕರು ಹೊಸದಾಗಿ ಆಯ್ಕೆಗೊಂಡಿದ್ದಾರೆ. ಅವರ ಆಶೋತ್ತರಗಳಿಗೆ ಸ್ಪಂದಿಸಬೇಕಾದರೆ ಬಜೆಟ್ ಮಂಡನೆ ಅನಿವಾರ್ಯ. ಆದರೆ ಮಾಧ್ಯಮಗಳು ಈ ವಿಚಾರದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿವೆ’ ಎಂದು ಆರೋಪಿಸಿದರು. 

ಇದೇ ಸಂದರ್ಭದಲ್ಲಿ ಶಾಸಕ ಡಾ.ಕೆ.ಸುಧಾಕರ್ ಮಾತನಾಡಿ, ‘ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡದಿದ್ದರೆ ಜುಲೈ 2ರಂದು ವಿಧಾನಸಭೆ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುತ್ತೇನೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !