ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ

Last Updated 8 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು:ಕೆರೆಗಳ ಅಭಿವೃದ್ಧಿ ಜೊತೆಗೆ, ಸಣ್ಣ ನೀರಾವರಿ ಪುನಶ್ವೇತನಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಪಾಂಡವಪುರ ತಾಲ್ಲೂಕಿನ ಬಳಘಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ₹100 ಕೋಟಿ ನೀಡಲಾಗಿದೆ. ಇದಲ್ಲದೆ, ಮುಂದಿನ ಮೂರು ವರ್ಷಗಳಲ್ಲಿ ₹300 ಕೋಟಿ ವೆಚ್ಚದಲ್ಲಿ ಬೀದರ್‌ ಜಿಲ್ಲೆಯ ಎಲ್ಲ ಕೆರೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದನ್ನು ಮನಗಂಡಿರುವ ಸರ್ಕಾರ, ನೀರಿನ ಅತಿ ಬಳಕೆ ತಾಲ್ಲೂಕುಗಳಲ್ಲಿ ಅಂತರ್ಜಲ ವೃದ್ಧಿಸಲು ಚೆಕ್‌ಡ್ಯಾಂ, ಬ್ಯಾರೇಜ್‌ ಬಾಂದಾರಗಳು ಹಾಗೂ ನೀರು ಮರುಪೂರಣ ಕಾಮಗಾರಿ ಕೈಗೆತ್ತಿಕೊಳ್ಳಲು ₹10 ಕೋಟಿ ಅನುದಾನ ಘೋಷಿಸಲಾಗಿದೆ.

ನೀರಾವರಿ ಕುರಿತ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ₹506 ಕೋಟಿಯನ್ನು ತೆಗೆದಿರಿಸಲಾಗಿದೆ. ಮಂಚನಬೆಲೆ ಜಲಾಶಯ ಕೆಳಭಾಗದ ಉದ್ಯಾನ ಹಾಗೂ ಹಾರಂಗಿ ಜಲಾನಯನ ಪ್ರದೇಶ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ.

ಕಲ್ಲಮರಡಿ ಏತ ನೀರಾವರಿ ಯೋಜನೆ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೌಜಲಗಿ, ಗೋಸಬಾಳ ಹಾಗೂ ಸುತ್ತ–ಮುತ್ತಲಿನ ಹಳ್ಳಿಗಳ 2,500 ಎಕರೆ ಜಮೀನುಗಳಿಗೆ ಕಲ್ಲಮರಡಿ ಏತ ನೀರಾವರಿ ಯೋಜನೆ ಜಾರಿಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT