‘ನಿರೀಕ್ಷಿತ ಅನುದಾನ ಸಿಗುವ ವಿಶ್ವಾಸ’

7
ಪರಮೇಶ್ವರ ಬಜೆಟ್‌ ಪೂರ್ವಭಾವಿ ಸಭೆ

‘ನಿರೀಕ್ಷಿತ ಅನುದಾನ ಸಿಗುವ ವಿಶ್ವಾಸ’

Published:
Updated:

ಬೆಂಗಳೂರು: ಬಜೆಟ್‌ ಮಂಡನೆ ಪೂರ್ವಭಾವಿಯಾಗಿ ಗೃಹ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಜೆಟ್‌ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವ ಮುನ್ನ ಗೃಹ ಮತ್ತು ನಗರಾಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಸಂಗ್ರಹಿಸಿದ್ದೇನೆ. ನಗರದಲ್ಲಿ‌ ಕಸ, ಸಂಚಾರ ದಟ್ಟಣೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ನಿವಾರಿಸಲು ಎಷ್ಟು ಹಣದ ಅವಶ್ಯಕತೆ ಬೇಕಾಗಲಿದೆ ಎಂಬುದರ ಬಗ್ಗೆ ಚರ್ಚಿಸಿದ್ದೇನೆ.‌ ಅಧಿಕಾರಿಗಳು ಈ ಬಗ್ಗೆ ಸಲಹೆ ನೀಡಿದ್ದು, ಬಜೆಟ್‌ನಲ್ಲಿ ನಿರೀಕ್ಷಿತ ಅನುದಾನ ಸಿಗುವ ವಿಶ್ವಾಸವಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !