ಸದನದ ಬಾವಿಗೆ ಇಳಿದು ಬಿಜೆಪಿ ಪ್ರತಿಭಟನೆ: ಮಧ್ಯಾಹ್ನ 3.30ಕ್ಕೆ ಕಲಾಪ ಮುಂದೂಡಿಕೆ

7

ಸದನದ ಬಾವಿಗೆ ಇಳಿದು ಬಿಜೆಪಿ ಪ್ರತಿಭಟನೆ: ಮಧ್ಯಾಹ್ನ 3.30ಕ್ಕೆ ಕಲಾಪ ಮುಂದೂಡಿಕೆ

Published:
Updated:

ಬೆಂಗಳೂರು: ಆಡಿಯೊ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ಒಪ್ಪಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಭಾಧ್ಯಕ್ಷ ಕೆ.ಆರ್‌. ರಮೇಶಕುಮಾರ್‌ ಅವರು ಕಲಾಪ ಆರಂಭವಾದ ಕೂಡಲೇ ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮಾತನಾಡಲು ಅವಕಾಶ ನೀಡಿದರು. 

‘ಆಪರೇಷನ್ ಕಮಲ ಆಡಿಯೊ ಪ್ರಕರಣ ವಿಶೇಷ ತನಿಖಾ ತಂಡದಿಂದ ತನಿಖೆ ಬೇಡ ಎಂದ ಯಡಿಯೂರಪ್ಪ, ಜೆ.ಸಿ.ಮಾಧುಸ್ವಾಮಿ. ಸರ್ಕಾರ ಹಠಮಾರಿತನ ಮುಂದುವರಿಸಿದರೆ ಧರಣಿ ಮಾಡಲಾಗುವುದೆಂದು’ ಎಚ್ಚರಿಕೆ ನೀಡಿದರು. 

ಮಧ್ಯ ಪ್ರವೇಶಿಸಿ ಮಾತನಾಡಿದ ಸಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ‘ಆಡಿಯೊ ಪ್ರಕರಣದ ತನಿಖೆ ಕುರಿತು ನಮ್ಮ ನಿಲುವು ಬದಲಿಸಲು ಸಾಧ್ಯವಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು’ ಎಂದು ಹೇಳಿದರು. 

ಬಿಜೆಪಿ ಸದಸ್ಯರ ಧರಣಿ‌ ನಡುವೆಯೂ‌ ಸಭಾಧ್ಯಕ್ಷರು ಮಸೂದೆಗಳಿಗೆ ಒಪ್ಪಿಗೆ ನೀಡಿದರು. ಬಿಜೆಪಿ ತೀವ್ರ ಗದ್ದಲದ ಹಿನ್ನೆಲೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ, ಬಜೆಟ್, ಧನವಿನಿಯೋಗ ಮಸೂದೆಯನ್ನು ಸ್ಪೀಕರ್‌ ಮತಕ್ಕೆ ಹಾಕಲಿಲ್ಲ. 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !