ಶನಿವಾರ, ಮಾರ್ಚ್ 25, 2023
28 °C

VIDEO| ಶಾಸಕ ರೇಣುಕಾಚಾರ್ಯಗೆ ಹೋರಿ ತಿವಿತ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಹೋರಿ ತಿವಿದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ.

ದೀಪಾವಳಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮಸ್ಥರು ರೇಣುಕಾಚಾರ್ಯ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಮೆರವಣಿಗೆ ಮಾಡುತ್ತಿದ್ದಾಗ ಎದುರಿನಿಂದ ಏಕಾಏಕಿ ಓಡಿಬಂದ ಹೋರಿ ಜನರತ್ತ ನುಗ್ಗಿ ಬಂದಿದೆ. ಆಗ ರೇಣುಕಾಚಾರ್ಯ ಸೇರಿ ಕೆಲವರು ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರ ಎಡಗೈ ಹಾಗೂ ಎಡಕಾಲಿಗೆ ತರಚಿದ ಗಾಯಗಳಾಗಿವೆ.

ಹೋರಿ ಓಡಿಸುವ ಹಬ್ಬದಲ್ಲಿ ಹೋರಿಗಳಲ್ಲೆ ಓಡಿ ಹೋದವು ಎಂದು ತಿಳಿದುಕೊಂಡು ಗ್ರಾಮಸ್ಥರು ವಿಜಯೋತ್ಸವ ಆಚರಿಸುತ್ತಿದ್ದರು. ರೇಣುಕಾಚಾರ್ಯ ಅವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆಯಲ್ಲಿ ಬರುತ್ತಿದ್ದಾಗ ಒಂದು ಹೋರಿ ಜನರತ್ತ ನುಗ್ಗಿ ಬಂದಿದೆ. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು