ಶುಕ್ರವಾರ, ಆಗಸ್ಟ್ 14, 2020
21 °C

ಕೂಡ್ಲಿಗಿ: ಎರಡು ಬಸ್‌ ಮುಖಾಮುಖಿ ಡಿಕ್ಕಿ, ಚಾಲಕ ಸಾವು 23 ಮಂದಿಗೆ ಗಾಯ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ: ತಾಲ್ಲೂಕಿನ ಮೊರಬ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ತಡ ರಾತ್ರಿ ಖಾಸಗಿ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿಯಾಗಿ ಒಬ್ಬ ಚಾಲಕ ಮೃತಪಟ್ಟು, 23ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. 

ಮಲ್ಲಿಕಾರ್ಜುನ ಡಿ. ಪಾಟೀಲ್(50) ಮೃತ ಚಾಲಕ ಎಂದು ಹೇಳಲಾಗಿದೆ. 

ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‍ನ ಚಾಲಕ ಕದಂವಿಶಾಲ್ ಅತಿವೇಗ ಹಾಗೂ ಅಜಾಗರೂಕತೆಯಿದ ಚಾಲನೆ ಮಾಡಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮೊರಬ ಕ್ರಾಸ್ ಬಳಿ ಬೆಂಗಳೂರಿನಿಂದ ವಿಜಯಪುರಕ್ಕೆ ಹೊರಟಿದ್ದ ಕೆಎಸ್‍ಆರ್‌ಟಿಸಿ ಬಸ್‍ಗೆ ಡಿಕ್ಕಿ ಹೊಡೆದ್ದಿದ್ದಾನೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ ಡಿ. ಪಾಟೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎರಡು ಬಸ್ಸುಗಳಲ್ಲಿದ್ದ 23 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ 8 ಜನರನ್ನು ಬಳ್ಳಾರಿ ವಿಮ್ಸ್‌ಗೆ ಸಾಗಿಸಲಾಗಿದೆ. ಘಟನೆ ಕುರಿತು ಕೂಡ್ಲಿಗಿ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು