ಮಂಗಳವಾರ, ಏಪ್ರಿಲ್ 7, 2020
19 °C

ಕಾರ್ಕಳ ಬಳಿ ಬಸ್‌ ಅಪಘಾತ: 9 ಮಂದಿ ಸಾವು, ಹಲವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಾರ್ಕಳ ತಾಲ್ಲೂಕಿನ ಮಾಳ ಚೆಕ್‌ಪೋಸ್ಟ್‌ ಸಮೀಪದ ಅಬ್ಬಾಸ್‌ಕಟ್ಟೆ ಬಳಿ ಶನಿವಾರ ಪ್ರವಾಸಿ ಬಸ್‌ ಅಪಘಾತವಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ಬಸ್‌ನಲ್ಲಿ 35 ಮಂದಿ ಪ್ರಯಾಣಿಸುತ್ತಿದ್ದರು. ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಅಪಘಾತಕ್ಕೀಡಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳು ತೆರಳಿವೆ.

6 ಮಂದಿ ಪುರುಷರು, 3 ಮಹಿಳೆಯರು ಮೃತಪಟ್ಟಿದ್ದು, ಅವರನ್ನು ಯೋಗೇಂದ್ರ, ಪ್ರೀತಂ ಗೌಡ, ಬಸವರಾಜ, ಅನುಜ್ಞಾ, ರಾಧಾ ರವಿ, ಶಾರುಲ್‌, ರಂಜಿತಾ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಕಾರ್ಕಳ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತವಾದ ಬಸ್‌ ಮೈಸೂರಿನಿಂದ ಕುದುರೆಮುಖ ಮಾರ್ಗವಾಗಿ ಕಾರ್ಕಳಕ್ಕೆ ಬರುತ್ತಿತ್ತು. ಮೈಸೂರಿನ ಐಟಿ ಕಂಪೆನಿಯೊಂದರ ರೆಕಾರ್ಡ್ ನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿ ಪ್ರವಾಸಕ್ಕೆ ಬಂದಿದ್ದರು ಎಂಬುದು ತಿಳಿದು ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು