ಸಾರಿಗೆ ಮುಷ್ಕರ ಅನುಮಾನ

6

ಸಾರಿಗೆ ಮುಷ್ಕರ ಅನುಮಾನ

Published:
Updated:

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಆ.7ರಂದು ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಬಹುತೇಕ ಸಂಘಟನೆಗಳು ಮುಷ್ಕರದಿಂದ ಹೊರಗುಳಿಯಲು ನಿರ್ಧರಿಸಿದ್ದರಿಂದಾಗಿ ಸಾರಿಗೆ ಸೌಕರ್ಯದಲ್ಲಿ ತೊಂದರೆಯಾಗುವ ಸಾಧ್ಯತೆ ಇಲ್ಲ.

ಆಟೋರಿಕ್ಷಾ ಚಾಲಕರ ಒಕ್ಕೂಟ ಮುಷ್ಕರಕ್ಕೆ ಬೆಂಬಲ ವ್ಯಕ್ತ ಪಡಿಸಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಆಟೋಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಂಭವ ಇದೆ.

ಮೋಟಾರು ವಾಹನ ತಿದ್ದುಪಡಿ ಮಸೂದೆ –2017ಕ್ಕೆ ವಿರೋಧ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಎಂದಿನಂತೆ ಇರಲಿವೆ ಎಂದು ಎರಡೂ ನಿಗಮಗಳ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

‘ಓಲಾ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಸ್ವತಂತ್ರ ಉದ್ಯಾನದಲ್ಲಿ ನಡೆಯಲಿರುವ ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ’ ಓಲಾ ಟ್ಯಾಕ್ಸಿ ಫಾರ್ ಶ್ಯೂರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷ ತಿಳಿಸಿದ್ದಾರೆ. ಆದರೆ, ‘ನಮ್ಮ ಸೇವೆಗಳು ಎಂದಿನಂತೆಯೇ ಇರಲಿವೆ. ಯಾವುದೇ ಸಮಸ್ಯೆ ಇಲ್ಲ’ ಎಂದು ಓಲಾ ಸಂಸ್ಥೆಯ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. 

ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟ (ಸಿಐಟಿಯು ಸಂಯೋಜಿತ), ಅಖಿಲಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಮಹಾಮಂಡಳ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಆ. 7ರಂದು ಬೆಳಿಗ್ಗೆ 10ಕ್ಕೆ ನಗರದ ಪುರಭವನದ ಆವರಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಯಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !