ಉಪಚುನಾವಣೆ: ‘ಸಂವಿಧಾನಕ್ಕೆ ತಿದ್ದುಪಡಿ ಅಗತ್ಯ’

7

ಉಪಚುನಾವಣೆ: ‘ಸಂವಿಧಾನಕ್ಕೆ ತಿದ್ದುಪಡಿ ಅಗತ್ಯ’

Published:
Updated:
Deccan Herald

ಹೊಸನಗರ/ ಬೈಂದೂರು: ‘ಕೇವಲ 4 ತಿಂಗಳ ಅವಧಿಗೆ ಉಪಚುನಾವಣೆ ಬೇಡವಾಗಿತ್ತು. ಆದರೆ ಸಂವಿಧಾನದ ಅನುಸಾರ ನಡೆಯಬೇಕು. ಚುನಾವಣಾ ವೆಚ್ಚಕ್ಕೆ ಕಡಿವಾಣ ಹಾಕಲು, ಅದನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೊಲ್ಲೂರು ಮೂಕಾಂಬಿಕೆ ಹಾಗೂ ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ನನ್ನ ಎದುರು ಸ್ಪರ್ಧಿಸಿದರೂ ಗೆಲವು ನನ್ನದೇ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡರು, ಕಾರ್ಯಕರ್ತರ ಜತೆಗೂಡಿ ಇದೇ 15ರಂದು ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಕೆಗೂ ಮುನ್ನ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ತಳಹಂತದ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !