ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪ‍್ರಚಾರಕರ ಪಟ್ಟಿಯಲ್ಲಿ ಸಚಿವ ಅನಂತ ಕುಮಾರ್ ಹೆಗಡೆ ಇಲ್ಲ

ಯಡಿಯೂರಪ್ಪ ಸ್ಟಾರ್ ಪ್ರಚಾರಕ
Last Updated 24 ಅಕ್ಟೋಬರ್ 2018, 16:51 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಪ್ರಚಾರಕರ ಪಟ್ಟಿಯಲ್ಲಿ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರಿಗೆ ಪಕ್ಷದ ಹೈಕಮಾಂಡ್‌ ಸ್ಥಾನ ನೀಡಿಲ್ಲ.

ಪಕ್ಷದ 38 ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಬಿಜೆಪಿ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಟಾರ್ ಪ್ರಚಾರಕ. ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಚಿವ ಅನಂತ ಕುಮಾರ್‌ ಎರಡನೇ ಸ್ಟಾರ್ ಪ್ರಚಾರಕ. ನಂತರದ ಸ್ಥಾನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ನೀಡಲಾಗಿದೆ. ಉಸ್ತುವಾರಿ. ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಅವರ ಹೆಸರು ನಂತರದ ಸ್ಥಾನದಲ್ಲಿದೆ.

‘ಸಂವಿಧಾನ ಬದಲಿಸಲು ಬಂದಿದ್ದೇವೆ’ ಎಂಬ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿತ್ತು. ವಿಧಾನಸಭಾ ಚುನಾವಣೆಯಲ್ಲಿ ದಲಿತರ ಮತ ಕೈತಪ್ಪಲು ಈ ಹೇಳಿಕೆಯೇ ಕಾರಣ ಎಂಬುದು ಪಕ್ಷದ ಕೆಲವು ಮುಖಂಡರ ಅನಿಸಿಕೆಯಾಗಿತ್ತು. ಬಳ್ಳಾರಿ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜಾತಿಯವರ ಮತಗಳು ಗಣನೀಯ ಸಂಖ್ಯೆಯಲ್ಲಿವೆ. ಈ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ. ಅನಂತಕುಮಾರ್ ಹೆಗಡೆ ಅವರು ಪ್ರಚಾರಕ್ಕೆ ಬಂದು ವಿವಾದಾತ್ಮಕ ಹೇಳಿಕೆ ನೀಡಿದರೆ ಈ ಮತಗಳಿಗೆ ಕುತ್ತು ತರಬಹುದು ಎಂಬುದು ನಾಯಕರ ಆತಂಕ. ಆ ಕಾರಣಕ್ಕೆ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬುದು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿರುವ ಮಾತು.

‘ಅನಂತ ಕುಮಾರ್‌ ಹೆಗಡೆ ಅವರನ್ನು ಕಡೆಗಣಿಸಿಲ್ಲ. ಅವರು ಯಾವತ್ತೂ ಸ್ಟಾರ್‌ ಪ್ರಚಾರಕರೇ’ ಎಂದು ಪಕ್ಷದ ಮುಖಂಡರೊಬ್ಬರು ಹೇಳಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT