ಮಂಗಳವಾರ, ಜನವರಿ 21, 2020
23 °C

ಕಾಂಗ್ರೆಸ್‌ ಕಳಪೆ ಪ್ರದರ್ಶನ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಲವಾದ ನಂಬಿಕೆ ಇಟ್ಟಿದ್ದೇನೆ. ಉಪಚುನಾವಣೆಯಲ್ಲಿ ಮತದಾರರು ಕೊಟ್ಟಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ನಾನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳಿಸಿದ್ದೇನೆ. ರಾಜ್ಯ ಉಸ್ತುವಾರಿ ಕಾರ್ಯದರ್ಶಿ ವೇಣುಗೋಪಾಲ್ ಅವರಿಗೆ ಈಗ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಮತದಾರರು ಅನರ್ಹ ಶಾಸಕರಿಗೆ ಪಾಠ ಕಲಿಸುತ್ತಾರೆ ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದರು.


ಸಿದ್ದರಾಮಯ್ಯ ಸಲ್ಲಿಸಿರುವ ರಾಜೀನಾಮೆ ಪತ್ರ

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು