ಶನಿವಾರ, ಜೂನ್ 19, 2021
27 °C

ತುಂಗಭದ್ರಾ ಜಲಾಶಯದಿಂದ ಬಳ್ಳಾರಿಗೆ ನೀರು: ಸಚಿವ ಬೈರತಿ ಬಸವರಾಜ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

bayrathi basavaraj

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ನೇರ ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ  ಮತ್ತು ಪಾಲಿಕೆ ಸಹಯೋಗದಲ್ಲಿ ನಗರದ ಸತ್ಯನಾರಾಯಣಪೇಟೆಯಲ್ಲಿ  ನಗರದ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ 12 ವಲಯಗಳ ಲೋಕಾರ್ಪಣೆ ಸಮಾರಂಭದಲ್ಲಿ ಸೋಮವಾರ ಮಾತನಾಡಿ, ' ನಗರಕ್ಕೆ ಇನ್ನು ಮುಂದೆ ನೀರಿನ ಕೊರತೆಯಾಗುವುದಿಲ್ಲ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ನಗರದಲ್ಲಿ ಇನ್ನೂ 15 ವಲಯಗಳಿದ್ದು, ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.
ಹೊಸಪೇಟೆ, ಕೊಪ್ಪಳದಲ್ಲೂ ಯೋಜನೆಗೆ ಚಾಲನೆ ನೀಡಲಾಗುವುದು' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು