ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಆರೋಗ್ಯದಲ್ಲಿ ಏರುಪೇರಾಗಿದ್ದು, ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಸಚಿವರು ಚೇತರಿಸಿಕೊಂಡಿದ್ದಾರೆ.
ಹುಬ್ಬಳ್ಳಿ ತಾಲ್ಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವರು, ಅಲ್ಲಿ ಉಪ್ಪಿಟ್ಟು ಸೇವಿಸಿದ್ದರು. ಬಳಿಕ ಸಚಿವರು ಸೇರಿದಂತೆ ಅವರ ಆಪ್ತಸಹಾಯಕ, ಗನ್ ಮ್ಯಾನ್ ಅವರಿಗೂ ವಾಂತಿಯಾಗಿದೆ. ಇದರಿಂದ ಅಸ್ವಸ್ಥಗೊಂಡ ಸಚಿವರು, ತಡ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕರಡಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆಹಾರ ತಪಾಸಣೆಗೆ ಸೂಚಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.