ಗುರುವಾರ , ಫೆಬ್ರವರಿ 27, 2020
19 °C

ಸಿಎಎ: 26ಕ್ಕೆ 58 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಕುರಿತಂತೆ ರಾಜ್ಯದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಜಾಗೃತಿ ಅಭಿಯಾನ ಸೋಮವಾರ ಕೊನೆಗೊಳ್ಳ ಬೇಕಿತ್ತು, ಅದನ್ನು ಗಣರಾಜ್ಯೋತ್ಸವ ದಿನದ ತನಕ ವಿಸ್ತರಿಸಲಾಗಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹೇಳಿದರು.

26ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ರಾಜ್ಯದ 58 ಸಾವಿರ ಬೂತುಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಎಎ ಮೂಲಕ ಲಕ್ಷಾಂತರ ಮಂದಿಗೆ ನೆಮ್ಮದಿ ತಂದುಕೊಟ್ಟ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ನೆರವೇರಿಸಲಾಗುವುದು ಹಾಗೂ ‘ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು’ ಎಂಬ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಅವರು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು