ಗುರುವಾರ , ಫೆಬ್ರವರಿ 27, 2020
19 °C
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಬೃಹತ್‌ ಸಮಾವೇಶ

ಕಲಬುರ್ಗಿ: ಅಸಹಕಾರ ಚಳವಳಿ ನಡೆಸಲು ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪ್ರಕ್ರಿಯೆ ಸಂದರ್ಭದಲ್ಲಿ ಯಾವುದೇ ದಾಖಲೆ ತೋರಿಸದೇ ಅಸಹಕಾರ ತೋರುವ ನಿರ್ಣಯವನ್ನು ಮಂಗಳವಾರ ಇಲ್ಲಿ ನಡೆದ ‘ರಾಷ್ಟ್ರೀಯ ಸಮಾವೇಶ’ದಲ್ಲಿ ಕೈಗೊಳ್ಳಲಾಯಿತು.

‘ಕಲಬುರ್ಗಿ ಪೀಪಲ್ಸ್‌ ಫೋರಂ’ನಿಂದ ಆಯೋಜಿಸಿದ್ದ ಈ ಸಮಾವೇಶದಲ್ಲಿ ಕಲಬುರ್ಗಿ, ಬೀದರ್‌, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆ ಗಳಿಂದ ಅಸಂಖ್ಯ ಜನರು ಭಾಗವಹಿಸಿದ್ದರು.

‘ಜನರನ್ನು ಧರ್ಮದ ಆಧಾರದ ಮೇಲೆ ಒಡೆದು ಆಳುವ ತನ್ನ ಕಾರ್ಯಸೂಚಿಯನ್ವಯವೇ ಬಿಜೆಪಿ ಇಂತಹ ವಿಭಜಕ ನೀತಿಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಮುಸ್ಲಿಮರಿಗಷ್ಟೇ ಅಲ್ಲದೇ ಇತರೆ ಧರ್ಮೀಯರಿಗೂ ಸಮಸ್ಯೆ ಆಗುತ್ತದೆ. ಮುಸ್ಲಿಂರನ್ನು ಇತರರು ಸಂಶಯದ ದೃಷ್ಟಿಯಿಂದಲೇ ನೋಡುವಂತಹ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದೆ’ ಎಂದು ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದರು.

ಸಿಪಿಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು, , ‘ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಿ ಭಾರತವನ್ನು ಹಿಂದೂರಾಷ್ಟ್ರವನ್ನಾಗಿ ಪರಿವರ್ತಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿ’ ಎಂದು ಟೀಕಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಕಲಬುರ್ಗಿ ಹಾಗೂ ಬೀದರ್‌ ಜಿಲ್ಲೆಯ ವಿವಿಧ ಪಕ್ಷಗಳ ಮುಖಂಡರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು