ಸಂಪುಟ ವಿಸ್ತರಣೆ ತಡೆಗೆ ಮೈತ್ರಿಕೂಟಕ್ಕೆ ಹೊಸ ನೆಪ

6

ಸಂಪುಟ ವಿಸ್ತರಣೆ ತಡೆಗೆ ಮೈತ್ರಿಕೂಟಕ್ಕೆ ಹೊಸ ನೆಪ

Published:
Updated:

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಹೊಸ ನೆಪವೊಂದು ಸಿಕ್ಕಿದೆ. ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆಯ ಕಾರಣ ಮುಂದಿಟ್ಟು ಅನಿರ್ದಿಷ್ಟಾವಧಿಗೆ ವಿಸ್ತರಣೆ ಮುಂದೂಡಲು ಎರಡೂ ಪಕ್ಷಗಳ ಮುಖಂಡರು ಮುಂದಾಗಿದ್ದಾರೆ.

‘ಅಕ್ಟೋಬರ್‌ 10 ಅಥವಾ 12ರಂದು ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಜತೆಗೆ, ಕೆಲವರ ಖಾತೆ ಬದಲಾವಣೆ ಮಾಡಲಾಗುತ್ತದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಳೆದ ವಾರ ಹೇಳಿದ್ದರು. ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರೂ ಇದೇ ಧಾಟಿಯಲ್ಲಿ ಮಾತನಾಡಿದ್ದರು. ಇದರಿಂದಾಗಿ, ಸಂಪುಟ ಸೇರುವವರ ಆಸೆ ಗರಿಗೆದರಿತ್ತು.

ಸಂಪುಟದಲ್ಲಿ ‘ಕೈ’ಪಾಲಿನ ಆರು ಖಾತೆಗಳು ಖಾಲಿ ಇವೆ. ಆಕಾಂಕ್ಷಿಗಳು 20ಕ್ಕೂ ಅಧಿಕ ಮಂದಿ ಇದ್ದಾರೆ. ಒಂದು ವೇಳೆ ವಿಸ್ತರಣೆ ಮಾಡಿದರೆ ಜೇನುಗೂಡಿಗೆ ಕಲ್ಲು ಎಸೆದಂತೆ ಆಗುತ್ತದೆ. ಕಾಂಗ್ರೆಸ್‌ನಲ್ಲಿ ಭಿನ್ನಮತ ಮತ್ತೆ ಜೋರಾಗುತ್ತದೆ. ವಿಸ್ತರಣೆ ಪ್ರಕ್ರಿಯೆಯನ್ನು ಆದಷ್ಟು ಮುಂದೂಡಬೇಕು. ಇದೇ ವೇಳೆ, ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಅತೃಪ್ತಿ ಶಮನ ಮಾಡಬೇಕು ಎಂಬುದು ಕಾಂಗ್ರೆಸ್‌ ನಾಯಕರ ಹವಣಿಕೆ. ಈಗ ಚುನಾವಣೆಯ ಗುರಾಣಿಯನ್ನು ಬಳಸುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಇದೇ 8ರಂದು ರಾಜ್ಯಕ್ಕೆ ಬರಲಿದ್ದಾರೆ. ಈ ವೇಳೆ, ರಾಜ್ಯ ನಾಯಕರು ಸಮಾಲೋಚನೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.

‘ಪಿತೃಪಕ್ಷ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಮಾಡಬೇಕು ಅಂದುಕೊಂಡಿದ್ದೆವು. ಈಗ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಯಾವಾಗ ಮಾಡಬೇಕು, ಏನು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !