ಸೋಮವಾರ, ಆಗಸ್ಟ್ 19, 2019
21 °C

11ಕ್ಕೆ ಸಂಪುಟ ವಿಸ್ತರಣೆ: ಬಿಎಸ್‌ವೈ

Published:
Updated:

ಬೆಂಗಳೂರು: ಇದೇ ತಿಂಗಳು 11ರಂದು (ಭಾನುವಾರ) ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೆಳಗಾವಿಯಲ್ಲಿ ಬುಧವಾರ ತಿಳಿಸಿದರು.

ಸಂಪುಟ ವಿಸ್ತರಣೆ ಕುರಿತು ಪಕ್ಷದ ಅಧ್ಯಕ್ಷ ಅಮಿತ್ ಶಾ ಜತೆ ಚರ್ಚಿಸಲು ದೆಹಲಿಗೆ ಹೋಗಿದ್ದ ಯಡಿಯೂರಪ್ಪ, ಸಚಿವರ ಪಟ್ಟಿಗೆ ಅಂಕಿತ ಸಿಗುವ ವಿಶ್ವಾಸದಲ್ಲಿದ್ದರು. ಭೇಟಿಗೆ ಸಮಯವೂ ನಿಗದಿಯಾಗಿತ್ತು.

ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ನಿಧನದಿಂದಾಗಿ, ಶಾ ಅವರ ಜತೆಗೆ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲು ಮುಖ್ಯಮಂತ್ರಿಗೆ ಸಾಧ್ಯವಾಗಲಿಲ್ಲ.

Post Comments (+)