ಶುಕ್ರವಾರ, ಜನವರಿ 24, 2020
28 °C
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌

ಸಂಪುಟ ವಿಸ್ತರಣೆಯಲ್ಲಿ ಹಸ್ತಕ್ಷೇಪ ಮಾಡಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಳಿನ್‌ಕುಮಾರ್‌ ಕಟೀಲ್‌

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪರಮಾಧಿಕಾರ ಹೊಂದಿದ್ದಾರೆ. ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದರು.

‘ಯಾರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾವ ಖಾತೆ ಕೊಡಬೇಕು ಎಂಬುದನ್ನು ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಬಳಿಕ ಎಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಎಲ್ಲ ಜಿಲ್ಲೆ ಮತ್ತು ಸಮುದಾಯಕ್ಕೆ
ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಪೌರತ್ವ (ತಿದ್ದುಪಡಿ) ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬೌದ್ಧಿಕ, ವೈಚಾರಿಕ ಹಾಗೂ ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಹೀಗಾಗಿ, ರಾಷ್ಟ್ರವಿರೋಧಿ ಕೃತ್ಯದಲ್ಲಿ ಇಡೀ ಪಕ್ಷ ನಿರತವಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರು ಸೇರಿ ಯಾವುದೇ ಅಲ್ಪಸಂಖ್ಯಾತ ಸಮುದಾಯದವರಿಗೆ ತೊಂದರೆ ಇಲ್ಲ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು